ನವದೆಹಲಿ: ಪದ್ಮಾವತಿ ಸಿನಿಮಾ ಈಗಾಗಲೇ ಸಾಕಷ್ಟು ಸುದ್ದಿಯಲ್ಲಿದೆ. ಆದರೆ ಇದರ ಕುರಿತು ಪ್ರಧಾನಿ ನರೇಂದ್ರ ಮೋದಿ, ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಮತ್ತು ಬಾಲಿವುಡ್ ನ ಖ್ಯಾತ ನಟರೆನಿಸಿಕೊಂಡವರು ಇದರ ಕುರಿತು ಯಾಕೆ ಸುಮ್ಮನಾಗಿದ್ದಾರೆ ಎಂದು ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಪ್ರಶ್ನಿಸಿದ್ದಾರೆ.
ಪ್ಯೂ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಶತ್ರುಘ್ನ ಸಿನ್ಹಾ ಅವರು ‘ನಮ್ಮ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರು ಹಾಗೂ ಪ್ರಧಾನಿ ಅವರು ಈ ವಿಷಯದ ಕುರಿತು ಯಾಕೆ ಮೌನ ತಾಳಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.
ಈಗಾಗಲೆ ಪದ್ಮಾವತಿ ಸಿನಿಮಾ ಸಾಕಷ್ಟು ವಿವಾದಗಳನ್ನು ಎದುರಿಸುತ್ತಿದೆ. ಆದರೆ ಬಾಲಿವುಡ್ ಖ್ಯಾತ ನಟರಾದ ಅಮಿತಾಭ್ ಬಚ್ಚನ್, ಅಮೀರ್ ಖಾನ್, ಶಾರೂಕ್ ಖಾನ್ ಇದರ ಕುರಿತು ಯಾಕೆ ಏನೂ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಜನ ಕೇಳುತ್ತಿದ್ದಾರೆ ಎಂದು ಪಟ್ನಾ ಸಾಹೀಬ್ ಕ್ಷೇತ್ರದ ಸಂಸದರೂ ಆಗಿರುವ ಸಿನ್ಹಾ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ