Webdunia - Bharat's app for daily news and videos

Install App

ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ?

Webdunia
ಶನಿವಾರ, 19 ಮಾರ್ಚ್ 2022 (09:54 IST)
ಲಕ್ನೋ : ಉತ್ತರ ಪ್ರದೇಶದಲ್ಲಿ ಎರಡನೇ ಅವಧಿಗೆ ಯೋಗಿ ಆದಿತ್ಯನಾಥ್ ಮಾರ್ಚ್ 25ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
 
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ.

ಪ್ರಮಾಣ ವಚನ ಸಮಾರಂಭವೂ ಮಾರ್ಚ್ 25ರಂದು ಸಂಜೆ 4 ಗಂಟೆಗೆ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಕ್ರೀಡಾಂಗಣವು 50,000 ಪ್ರೇಕ್ಷಕರು ವೀಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 200 ವಿವಿಐಪಿಗಳಿಗೆ ವ್ಯವಸ್ಥೆ ಮಾಡಲಾಗುತ್ತಿದೆ.

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸೇರಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿಪಕ್ಷಗಳು ಸೇರಿದಂತೆ ಇತರ ಪ್ರಮುಖ ನಾಯಕರು ಕಾರ್ಯಕ್ರಮಕ್ಕೆ ಹಾಜರಾಗುವ ನಿರೀಕ್ಷೆಯಿದೆ. 

ಯೋಗಿ ಆದಿತ್ಯನಾಥ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಪಕ್ಷ ಮುಂದಾಗಿತ್ತು, ಈಗಾಗಲೇ ಆಹ್ವಾನಿತರ ಪಟ್ಟಿಯನ್ನು ಸಿದ್ಧಪಡಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments