ಬಿಹಾರ್ ಮಾಜಿ ಮುಖ್ಯಮಂತ್ರಿ ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಪರಿವಾರದ ಆಸ್ತಿಯನ್ನು ಆದಾಯ ತೆರಿಗೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ಡಿದೇವಿ, ಪುತ್ರಿ ಮೀಸಾ ಭಾರ್ತಿ ಮತ್ತು ಪುತ್ರ ಬಿಹಾರ್ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಬೇನಾಮಿ ಆಸ್ತಿಗಳನ್ನು ಐಟಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಲಾಲೂ ಯಾದವ್ ಪರಿವಾರಕ್ಕೆ ಸೇರಿದ 10 ಕ್ಕೂ ಹೆಚ್ಚು ಫ್ಲ್ಯಾಟ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಬೇನಾಮಿ ಆಸ್ತಿ ಹೊಂದಿದ ಆರೋಪದಡಿ ಲಾಲು ಯಾದವ್, ರಾಬ್ಡಿದೇವಿ, ತೇಜಸ್ವಿ ಯಾದವ್ ಮತ್ತು ಮೀಸಾ ಭಾರ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪರಿವಾರ ಬೇನಾಮಿ ಆಸ್ತಿ ಹೊಂದಿದೆ ಎನ್ನುವ ಬಗ್ಗೆ ಕೆಲ ತಿಂಗಳುಗಳಿಂದ ತನಿಖೆ ನಡೆಸುತ್ತಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದು ದಾಳಿ ನಡೆಸಿ ಬೇನಾಮಿ ಆಸ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.