Webdunia - Bharat's app for daily news and videos

Install App

ಡ್ಯಾನ್ಸ್ ಮಾಡುವುದನ್ನು ನಿಲ್ಲಿಸಿ ಎಂದಿದ್ದಕ್ಕೆ ಮದುವೆ ಮನೆಯಲ್ಲಿ ನಡೆದಿದೆ ಇಂತಹ ಘೋರ ಕೃತ್ಯ

Webdunia
ಭಾನುವಾರ, 20 ಜನವರಿ 2019 (06:29 IST)
ಹರಿಯಾಣ: ಮದುವೆಗೆ ಅಡ್ಡಿಯಾಗಬಾರದೆಂದು ಡ್ಯಾನ್ಸ್ ಮಾಡುವುದನ್ನು ನಿಲ್ಲಿಸಿ ಎಂದ ವಧುವಿನ ಸಂಬಂಧಿಕನಿಗೆ ವರನ ಕಡೆಯವರು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಹರಿಯಾಣದ ಅಂಬಾಲಾದಲ್ಲಿ ನಡೆದಿದೆ.


ವಿಕಾಸ್ ಕೊಲೆಯಾದ ದುರ್ದೈವಿ. ವರನ ಸಂಬಂಧಿಕ ಸಂಜಯ್ ಕೊಲೆ ಮಾಡಿದ ಆರೋಪಿ. ಮದುವೆಯ ಸಂದರ್ಭದಲ್ಲಿ ವರನನ್ನು ಮೆರವಣಿಗೆಯ ಮೂಲಕ ನೃತ್ಯ ಮಾಡುತ್ತಾ ಕರೆದುಕೊಂಡ ಹೋದ ವರನ ಕಡೆಯವರು ಮದುವೆ ಮಂಟಪಕ್ಕೆ ಬಂದು ರಾತ್ರಿ 10 ಗಂಟೆಯಾದರೂ ಅವರು ಡ್ಯಾನ್ಸ್ ಮಾಡುತ್ತಲೇ ಇದ್ದರು.


ಹೀಗೆ ಮಾಡಿದರೆ ಮದುವೆಗೆ ತೊಂದರೆಯಾಗುತ್ತದೆ ಎಂದು ವಧುವಿನ ಕಡೆಯವರಾದ ವಿಕಾಸ್ ವರನ ಸಂಬಂಧಿಕರಲ್ಲಿ ಡ್ಯಾನ್ಸ್ ಮಾಡುವುದನ್ನು ನಿಲ್ಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಕೋಪಗೊಂಡ ವರನ ಕಡೆಯವರು ವಧುವಿನ ಕುಟುಂಬಸ್ಥರಲ್ಲಿ ಜಗಳವಾಡಿದ್ದಾರೆ. ಈ ಜಗಳ ವಿಕೋಪಕ್ಕೆ ತಿರುಗಿ ವರನ ಸಂಬಂಧಿಕ ಸಂಜಯ್, ವಿಕಾಸ್‍ಗೆ ಚಾಕುಯಿಂದ ಇರಿದಿದ್ದಾನೆ. ಪರಿಣಾಮ ವಿಕಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಸಂಜಯ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments