ಶಾಂಘೈ ಸಹಕಾರ ಸಂಘಟನೆಯ ಸಮಾವೇಶದಲ್ಲಿ ಮಾತನಾಡಿದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುವುದನ್ನು ನಿಲ್ಲಿಸಬೇಕು ಎಂಬ ದೃಢ ನಿಲುವನ್ನು ಪ್ರಕಟಿಸಿದ್ದಾರೆ.
ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ-ಜರ್ದಾರಿ ಅವರ ಉಪಸ್ಥಿತಿಯಲ್ಲಿಯೇ ಜೈಶಂಕರ್ ಖಡಕ್ಕಾಗಿ ಮಾತನಾಡಿದ್ದಾರೆ. ನಮ್ಮ ಕಣ್ಮುಂದೆಯೇ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳ ಬಗ್ಗೆ ಗಮನ ಹರಿಸದಿದ್ದಲ್ಲಿ ಅದು ಸದಸ್ಯ ರಾಷ್ಟ್ರಗಳ ಭದ್ರತೆಗೆ ಅಪಾಯವಾಗಿ ಪರಿಣಮಿಸುತ್ತದೆ.
ಅಂದೊಂದು ದಿನ ಇಡೀ ವಿಶ್ವವೇ ಕೋವಿಡ್ ವಿರುದ್ಧ ಹೋರಾಡುತ್ತಿತ್ತು. ಆಗಲೂ ಕೆಲವೆಡೆ ಭಯೋತ್ಪಾದನೆಯ ಚಟುವಟಿಕೆ ನಿಂತಿರಲಿಲ್ಲ. ಭಯೋತ್ಪಾದನೆಯನ್ನ ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಿಕೊಳ್ಳಳಾಗುವುದಿಲ್ಲ. ಇಂತಹ ಬೆದರಿಕೆಗಳ ವಿರುದ್ಧ ಹೋರಾಟ ನಡೆಸುವುದೇ ಶಾಂಘೈ ಸಂಗಟನೆಯ ಮೂಲ ಉದ್ದೇಶ ಎಂದು ಜೈಶಂಕರ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಇದೇ ವೇಳೆ ಪಾಕ್ ವಿದೇಶಾಂಕ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಸಹ ಮಾತನಾಡಿ, ಭಯೋತ್ಪಾದನೆ ಜಾಗತಿಕ ಭದ್ರತೆಗೆ ಅಪಾಯಕಾರಿಯಾಗಿದೆ. ಇದರ ವಿರುದ್ಧ ಹೋರಾಡುವುದು ನಮ್ಮ ಜಂಟಿ ಹೊಣೆಗಾರಿಕೆಯಾಗಿದೆ. ಎಸ್ಸಿಒ ಸದಸ್ಯ ರಾಷ್ಟ್ರಗಳು ಒಗ್ಗಟ್ಟಿನ ಹೋರಾಟ ನಡೆಸಬೇಕು ಎಂದು ಪ್ರತಿಪಾದಿಸಿದರು.