ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಮುಖ ರಾಜಕೀಯ ಮುಖಂಡರು, ಮಾಜಿ ಸಿಎಂಗಳಿಗೆ ಗೃಹಬಂಧನ ವಿಧಿಸಲಾಗಿದ್ದು, ಕಣಿವೆ ರಾಜ್ಯದಲ್ಲಿ ಭಾರೀ ಕೋಲಾಹಲ ನಡೆದಿದೆ.
ಮಾಜಿ ಸಿಎಂಗಳಾದ ಮೆಹಬೂಬಾ ಮುಫ್ತಿ, ಒಮರ್ ಅಬ್ಧುಲ್ಲಾ ಸೇರಿದಂತೆ ಪ್ರಮುಖ ರಾಜಕೀಯ ನಾಯಕರಿಗೆ ಗೃಹಬಂಧನ ವಿಧಿಸಲಾಗಿದೆ. ಮೊಬೈಲ್ ಇಂಟರ್ ನೆಟ್ ಸೇವೆ ಬಂದ್ ಮಾಡಲಾಗಿದೆ. ಶಾಲಾ ಕಾಲೇಜುಗಳನ್ನೂ ಮುಚ್ಚಲಾಗಿದೆ.
ಶ್ರೀನಗರದ ಕೆಲವೆಡೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಇಂದು ಕೇಂದ್ರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ನೇತೃತ್ವ ವಹಿಸಲಿದ್ದಾರೆ. ಅದಾದ ಬಳಿಕ ಕಾಶ್ಮೀರದ ಸ್ಥಿತಿಗತಿಗಳ ಕುರಿತು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.