ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧದ ಇಡಿ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಹೇಳಿದ್ದಾರೆ.
ಜನಾರ್ದನ ರೆಡ್ಡಿ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ, ಮುಟ್ಟುಗೋಲು ಹಾಕಿಕೊಂಡಿರುವ 841 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹಿಂತಿರುಗಿಸುವಂತೆ ಜಾರಿ ನಿರ್ದೇಶನಾಲಯ ಇಲಾಖೆಗೆ ಆದೇಶಿಸಿತ್ತು.
ಹೈಕೋರ್ಟ್ ನೀಡಿದ ತೀರ್ಪು ಆಘಾತಕಾರಿಯಾಗಿದ್ದರಿಂದ ಹೈಕೋರ್ಟ್ ತೀರ್ಪಿನ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ.
ಅಕಮ ಗಣಿಗಾರಿಕೆಯಲ್ಲಿ ಪಾಲ್ಗೊಂಡು ಲಕ್ಷ ಲಕ್ಷ ಟನ್ ಅಕ್ರಮ ಕಬ್ಬಿಣ ಅದಿರನ್ನು ರಫ್ತುಗೊಳಿಸಿರುವುದು, ರಾಜ್ಯಗಳ ಗಡಿಯನ್ನೇ ಬದಲಿಸಿರುವುದು ಸೇರಿದಂತೆ ಹಲವು ಆರೋಪಗಳನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ಎದುರಿಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.