ಕಳೆದ ಸೆಪ್ಟೆಂಬರ್ 22 ರಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದ್ದು ಈ ವಾರಾಂತ್ಯದೊಳಗೆ ಅವರು ಬಿಡುಗಡೆಯಾಗಲಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಮೂಲಗಳು ತಿಳಿಸಿವೆ.
ಜಯಾ ಸೆಪ್ಸೀಸ್ ಸೋಂಕಿನಿಂದ ಬಳಲುತ್ತಿರುವಾಗಿ ಲಂಡನ್ ವೈದ್ಯರು ಪತ್ತೆ ಹಚ್ಚಿದ್ದು ಸೋಂಕು ಉಲ್ಭಣಿಸಿದರೆ ದೇಹದ ಇತರೆ ಭಾಗಗಳು ಕಾರ್ಯ ನಿರ್ವಹಿಸುವ ಸಾಧ್ಯತೆಗಳಿವೆ. ಒಂದು ವೇಳೆ ಮೆದುಳಿಗೆ ಸೋಂಕು ಹರಡಿದರೆ ಜೀವಾಪಾಯದ ಸಾಧ್ಯತೆಗಳಿವೆ.
ಜಯಲಲಿತಾ ಕಳೆದ ಸೆಪ್ಟೆಂಬರ್ 22 ರಂದು ನಿರ್ಜಲೀಕರಣ ಮತ್ತು ಜ್ವರದ ಬಾಧೆಗೊಳಗಾಗಿ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಕೆಲವು ದಿನಗಳ ಮಟ್ಟಿಗೆ ಅವರನ್ನು ನಿಗಾವಣೆಯಲ್ಲಿ ಇಡಲಾಗುವುದು ಎಂದು ಆಸ್ಪತ್ರೆ ಸೆಪ್ಟೆಂಬರ್ 23 ರಂದು ಪತ್ರಿಕಾ ಹೇಳಿಕೆಯನ್ನು ನೀಡಿತ್ತು. ಆದರೆ ಅವರ ಆರೋಗ್ಯದ ಕುರಿತಾದ ಯಾವುದೇ ನಂಬಲರ್ಹ ವರದಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.
ಜಯಾ ದೇಹ ಸ್ಥಿತಿ ಬಗ್ಗೆ ಊಹಾಪೋಗಳು ಎದ್ದಿರುವ ಹಿನ್ನೆಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡುವಂತೆ ಟ್ರಾಫಿಕ್ ರಾಮಸ್ವಾಮಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ