ಐಟಿ ದಾಳಿ ನಡೆಯುತ್ತಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಜೆಡಿಎಸ್ ಬಂಡಾಯ ಶಾಸಕರಾದ ಚಲುವರಾಯಸ್ವಾಮಿ, ಜಮೀರ್ ಅಹಮ್ಮದ್, ಎಚ್.ಸಿ. ಬಾಲಕೃಷ್ಣ ಭೇಟಿ ನೀಡಿದ್ದಾರೆ. ಆದರೆ, ಡಿಕೆ ಭೇಟಿಗೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ವಾಪಸ್ ಆಗಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಜಮೀರ್ ಅಹಮ್ಮದ್, ರಾಜಕೀಯ ಕುತಂತ್ರದಿಂದ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಇದರಲ್ಲಿ ಅಮಿತಾ ಶಾ ಅವರ ನೇರ ಕೈವಾಡವಿದೆ. ಈ ದಾಳಿಯನ್ನ ನಾವು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.
ಐಟಿ ಇಲಾಖೆಗೆ ತನ್ನದೇ ಆದ ಅಧಿಕಾರವಿದೆ. ರಾಜ್ಯಸಭೆಯ ಚುನಾವಣೆಯ ಸಂದರ್ಭ ದಾಳಿ ನಡೆಸಿದ್ದು ಸರಿಯಲ್ಲ. ಇದರಲ್ಲಿ ಕೇಂದ್ರ ಸರ್ಕಾರದ ಕೈವಾಡವಿದೆ. ಬಿಜೆಪಿ ಈ ವರ್ತನೆ ಮುಂದಿನ ದಿನ ಮಾರಕವಾಗಲಿದೆ. ಡಿ.ಕೆ. ಶಿವಕುಮಾರ್ ಈ ದಾಳಿಯನ್ನ ಸಮರ್ಥವಾಗಿ ಎದುರಿಸುತ್ತಾರೆ ಎಂದು ಶಾಸಕ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ