Webdunia - Bharat's app for daily news and videos

Install App

ವಿದ್ಯಾರ್ಥಿನಿಯರಿಂದಲೇ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿ ಹಲ್ಲೆ, ವಿಡಿಯೋ ಚಿತ್ರಣ

Webdunia
ಬುಧವಾರ, 9 ಆಗಸ್ಟ್ 2017 (14:09 IST)
ಆಘಾತಕಾರಿ ಘಟನೆಯೊಂದರಲ್ಲಿ, ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿ ಮೊಬೈಲ್ ಕಳ್ಳತನ ಮಾಡಿದ್ದಾಳೆ ಎಂದು ಆರೋಪಿಸಿದ ಇತರ ವಿದ್ಯಾರ್ಥಿನಿಯರು ಆಕೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದಲ್ಲದೇ ಸಂಪೂರ್ಣ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಹೇಯ ಕೃತ್ಯ ಎಸಗಿದ್ದಾರೆ. 

ಮಾಧ್ಯಮ ವರದಿಗಳ ಪ್ರಕಾರ, ವಿದ್ಯಾರ್ಥಿನಿಯರು ತಾವು ಚಿತ್ರಿಸಿಕೊಂಡು ವಿಡಿಯೋವನ್ನು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಹರಿದು ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಈ ಘಟನೆ ಆಗಸ್ಟ್ 4 ರಂದು ಸಂತಾಲ್ ಪರ್ಗಾನಾ ಮಹಿಳಾ ಕಾಲೇಜಿನಲ್ಲಿ ನಡೆದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಬುಡಕಟ್ಟು ವಿದ್ಯಾರ್ಥಿನಿಯ ನಗ್ನ ಚಿತ್ರಗಳ ವಿಡಿಯೋ ಬಹಿರಂಗವಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
 
ನಾನು 500 ರೂಪಾಯಿಗಳನ್ನು ನೀಡಿ ಸೆಕೆಂಡ್ ಹ್ಯಾಂಡ್ ಮೊಬೈಲ್ ಖರೀದಿಸಿದ್ದೇನೆ. ಆದರೆ. ಹಾಸ್ಟೇಲ್‌‍ನಲ್ಲಿರು ವ ಕೆಲ ವಿದ್ಯಾರ್ಥಿನಿಯರು ನನ್ನ ಮೊಬೈಲ್‌ನ್ನು ಕದ್ದ ಮೊಬೈಲ್ ಎಂದು ಆರೋಪಿಸಿದ್ದಾಗಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ.
 
ವಿದ್ಯಾರ್ಥಿಗಳು ನಂತರ ವಿದ್ಯಾರ್ಥಿ ಕೌನ್ಸಿಲ್ ಸಭೆ ಕರೆದು. 18,600 ರೂ ದಂಡವನ್ನು ಪಾವತಿಸುವಂತೆ ವಿದ್ಯಾರ್ಥಿನಿಗೆ ಒತ್ತಡ ಹೇರಿದ್ದಾರೆ. ದಂಡ ತೆರಲು ವಿಫಲವಾದಲ್ಲಿ ನಗ್ನ ವೀಡಿಯೊವನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದರು ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ. 
 
ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿಯ ತಂದೆ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಪುತ್ರಿಗೆ ನ್ಯಾಯ ದೊರೆಯದಿದ್ದಲ್ಲಿ ಆಕೆಯೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರ ಮುಂದೆ ಬೆದರಿಕೆಯೊಡ್ಡಿದ್ದಾನೆ..  
 
ಏತನ್ಮಧ್ಯೆ, ಘಟನೆಯ ಬಗ್ಗೆ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿ ಎಂದು ಮುಖ್ಯಮಂತ್ರಿ ರಘುಬರ್ ದಾಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ