ನವದೆಹಲಿ : ಈ ಹಿಂದೆ ಕೇಂದ್ರ ಸಚಿವರಾಗಿದ್ದ ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲು ಬಿಜೆಪಿಯ ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಜೆ.ಪಿ. ನಡ್ಡಾ(58) ಅವರು ಹಿಂದಿನ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆರೆಸ್ಸೆಸ್ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಜವಾಬ್ದಾರಿಯನ್ನು ಹೊತ್ತು, ಪ್ರತಿಪಕ್ಷಗಳ ವಿರೋಧದ ನಡುವೆಯೂ ಬಿಜೆಪಿಯು ಉತ್ತರ ಪ್ರದೇಶದಲ್ಲಿ ಗೆಲುವು ಸಾಧಿಸಲು ಕಾರಣರಾಗಿದ್ದರು. ಈ ಹಿನ್ನಲೆಯಲ್ಲಿ ಈ ಬಾರಿಯ ಸರ್ಕಾರದಲ್ಲಿ ಅಮಿತ್ ಶಾ ಅವರು ಗೃಹ ಸಚಿವರಾಗಿ ಸಂಪುಟ ಸೇರ್ಪಡೆಯಾದ ಕಾರಣ .ಪಿ. ನಡ್ಡಾ ಅವರು ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗುವ ನಿರೀಕ್ಷೆಗಳಿದ್ದವು.
ಆದರೆ ಬಿಜೆಪಿಯ ಚಾಣಿಕ್ಯ ಎಂದೇ ಪ್ರಸಿದ್ಧರಾದ ಅಮಿತ್ ಶಾ ಅವರ ಚಾಣಾಕ್ಷತನದಿಂದ ಬಿಜೆಪಿ ಹಲವಾರು ಚುನಾವಣೆಗಳಲ್ಲಿ ಜಯ ಸಾಧಿಸಿದೆ. ಆದ್ದರಿಂದ ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಚುನಾವಣೆ ಮುಗಿಯುವವರೆಗೂ ಅಮಿತ್ ಶಾ ಅವರೇ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ. ಆನಂತರ 2020ರ ಜನವರಿಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು,. ನಡ್ಡಾ ಅವರೇ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.