ಲಕ್ನೋ: ಉತ್ತರ ಪ್ರದೇಶದ ಮಾಜಿ ಸಚಿವ ಬಿಎಸ್ ಪಿ ನಾಯಕ ಗಾಯತ್ರಿ ಪ್ರಜಾಪತಿಗೆ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶ ಓಂ ಪ್ರಕಾಶ್ ಮಿಶ್ರಾರನ್ನು ಅಮಾನತುಗೊಳಿಸಲಾಗಿದೆ.
ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಪ್ರಕಾಶ್, ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯ ಪುತ್ರಿಯ ಮೇಲೂ ಅತ್ಯಾಚಾರಕ್ಕೆ ಯತ್ನಿಸಿ ಗಾಯತ್ರಿ ಪ್ರಜಾಪತಿಗೆ ಬೇಲ್ ನೀಡಿದ್ದರು.
ಇದು ವಿವಾದಕ್ಕೆ ಕಾರಣವಾಗಿತ್ತು. ಇದನ್ನು ಪ್ರಶ್ನಿಸಿ ಸಿಎಂ ಯೋಗಿ ನೇತೃತ್ವದ ರಾಜ್ಯ ಸರ್ಕಾರ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ.
ವಿಶೇಷವೆಂದರೆ ಈ ನ್ಯಾಯಾಧೀಶರು ಇದೇ ತಿಂಗಳು ಅಂತ್ಯಕ್ಕೆ ನಿವೃತ್ತರಾಗಲಿದ್ದರು. ಪ್ರಜಾಪತಿ ಪ್ರಕರಣ ಉತ್ತರ ಪ್ರದೇಶ ಚುನಾವಣೆ ಸಂದರ್ಭದಲ್ಲಿ ಭಾರೀ ಗುಲ್ಲೆಬ್ಬಿಸಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ