Webdunia - Bharat's app for daily news and videos

Install App

ಕಲ್ಲಕುರಿಚಿ ಕಳ್ಳಬಟ್ಟಿ ದುರಂತ: ಮೃತರ ಸಂಖ್ಯೆ 53ಕ್ಕೆ ಏರಿಕೆ, 7ಮಂದಿ ಅರೆಸ್ಟ್

Sampriya
ಶನಿವಾರ, 22 ಜೂನ್ 2024 (15:19 IST)
Photo Courtesy X
ತಮಿಳುನಾಡು: ಕಲ್ಲಕುರಿಚಿ ನಡೆದ ಕಳ್ಳಬಟ್ಟಿ ದುರಂತದಲ್ಲಿ ಮೃತರ ಸಂಖ್ಯೆ 50 ರಿಂದ 53 ಕ್ಕೆ ಏರಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಅಕ್ರಮ ಮದ್ಯ ಸೇವಿಸಿದ ಒಟ್ಟು 193 ರೋಗಿಗಳ ಪೈಕಿ 140 ಮಂದಿ ಸುರಕ್ಷಿತವಾಗಿದ್ದಾರೆ ಎಂದು ಕಲ್ಲಕುರಿಚಿ ಜಿಲ್ಲಾಧಿಕಾರಿ ಎಂ.ಎಸ್.ಪ್ರಶಾಂತ್ ತಿಳಿಸಿದ್ದಾರೆ.

"ಅಕ್ರಮ ಮದ್ಯ ಸೇವಿಸಿದ 193 ಜನರು ಆಸ್ಪತ್ರೆಗೆ ಬಂದಿದ್ದಾರೆ. ಅದರಲ್ಲಿ 193, 140 ಜನರು ಪ್ರಸ್ತುತ ಸುರಕ್ಷಿತವಾಗಿದ್ದಾರೆ, ಅವರಲ್ಲಿ ಕೆಲವರು ವೆಂಟಿಲೇಟರ್‌ಗಳಲ್ಲಿದ್ದಾರೆ. ಇದೀಗ, 53 ಜನರು ಸಾವನ್ನಪ್ಪಿದ್ದಾರೆ" ಎಂದು ಅವರು ಹೇಳಿದರು.

ಪ್ರಕರಣದಲ್ಲಿ ಇದುವರೆಗೆ ಏಳು ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ತಮಿಳುನಾಡು ಪೊಲೀಸರ ಸಿಬಿಐ ಸಿಐಡಿ ಶಾಖೆಗೆ ನೀಡಲಾಗಿದೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಆರಂಭಿಕ ಹಂತದಲ್ಲಿ ವಿಶೇಷ ವೈದ್ಯರನ್ನು ತಂಡವನ್ನು ರಚಿಸಲಾಗಿದೆ.

ಸುಮಾರು 56 ವೈದ್ಯರನ್ನು ಕರೆತರಲಾಗಿದೆ. ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಉಸಿರಾಟದ ತೊಂದರೆ ಇರುವ ಅನೇಕ ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಕಲ್ಲಾಕುರಿಚಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದೇ ವೇಳೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದ ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ತಿರುಚಿರಾಪಳ್ಳಿ ಜಿಲ್ಲೆಯಲ್ಲಿ 250 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ವಿಲೇವಾರಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments