Webdunia - Bharat's app for daily news and videos

Install App

ಅನೈತಿಕ ಸಂಬಂಧ ಹೊಂದಿರುವ ಮಹಿಳೆಯ ತಲೆಬೋಳಿಸುವಂತೆ ಗ್ರಾಮ ಪಂಚಾಯಿತಿ ಆದೇಶ

Webdunia
ಗುರುವಾರ, 13 ಅಕ್ಟೋಬರ್ 2016 (14:37 IST)
ಪರಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ ಆರೋಪದ ಮೇಲೆ ಮಹಿಳೆ ತಲೆಗೂದಲು ಕತ್ತರಿಸುವಂತೆ ಸ್ಥಳೀಯ ಗ್ರಾಮ ಪಂಚಾಯತಿಯೊಂದು ಆದೇಶ ನೀಡಿದ ಘಟನೆ ಜಿಲ್ಲೆಯ ಚಾಂದಪುರ್ ಗ್ರಾಮದಲ್ಲಿ ವರದಿಯಾಗಿದೆ.
 
32 ವರ್ಷ ವಯಸ್ಸಿನ ಮಹಿಳೆಯೊಬ್ಬಳು ಪತಿಯನ್ನು ತೊರೆದು ಪರಪುರುಷನೊಂದಿಗೆ ಪರಾರಿಯಾಗಿದ್ದಳು. ನಂತರ ಅವರಿಬ್ಬರನ್ನು ಮತ್ತೆ ಗ್ರಾಮಕ್ಕೆ ಕರೆ ತಂದು ವಿಚಾರಣೆ ನಡೆಸಲಾಯಿತು. ಗ್ರಾಮದ ಮುಖ್ಯಸ್ಥನೊಬ್ಬ, ಮಹಿಳೆಗೆ 6 ಸಾವಿರ ರೂ.ದಂಡ ತೆರುವಂತೆ ಆದೇಶಿಸಿದ್ದಾನೆ.
 
ಮಹಿಳೆ ದಂಡ ಪಾವತಿಸುವಲ್ಲಿ ವಿಫಲವಾಗಿದ್ದರಿಂದ ರಾತ್ರಿ ಹೊತ್ತು ಆಕೆಯ ಮನೆಗೆ ನುಗ್ಗಿದ ಗ್ರಾಮಸ್ಥರು ಆಕೆಯ ತಲೆಬೋಳಿಸಿದ್ದಾರೆ.
 
ಮಾರನೇ ದಿನ ಮಹಿಳೆ ಗ್ರಾಮಸ್ಥರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ದೂರು ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇತರ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments