ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಎರಡು ಕೋಟಿ ರೂಪಾಯಿ ಲಂಚ ನೀಡಿದ್ದೇನೆ ಎಂದು ಆರೋಪಿಸಿರುವ ಮಾಜಿ ಸಚಿವ ಕಪಿಲ್ ಮಿಶ್ರಾ, ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ ಎಂದು ಆರೋಗ್ಯ ಖಾತೆ ಸಚಿವ ಸತ್ಯೇಂದ್ರ ಜೈನ್ ವಾಗ್ದಾಳಿ ನಡೆಸಿದ್ದಾರೆ.
ಕಳೆದ ಮೇ 5 ರಂದು ನಾನು ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸಕ್ಕೆ ಹೋಗಿಯೇ ಇಲ್ಲ. ಇದನ್ನು ಸಾಬೀತುಪಡಿಸಲು ನನ್ನ ಬಳಿ ಸಾಕ್ಷ್ಯಗಳಿವೆ. ಸುಳ್ಳು ಹೇಳುವುದಕ್ಕೂ ಮಿತಿಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವ ಸ್ಥಾನದಿಂದ ವಜಾಗೊಳಿಸಿದ ನಂತರ ಮಿಶ್ರಾ ಮಾನಸಿಕ ಸ್ಥಿಮಿತ ಕಳೆದುಕೊಂಡು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾನೆ. ಒಂದು ವೇಳೆ ಆರೋಪ ಸತ್ಯವಾಗಿದ್ದಲ್ಲಿ ದಾಖಲೆಗಳನ್ನು ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದ್ದಾರೆ.
ದೆಹಲಿ ಸಿಎಂ ಕೇಜ್ರಿವಾಲ್ ಅವರಿಗೆ ಅವರದೇ ನಿವಾಸದಲ್ಲಿ ಜೈನ್, 2 ಕೋಟಿ ರೂಪಾಯಿ ನಗದು ನೀಡಿರುವುದನ್ನು ಕಣ್ಣಾರೆ ನೋಡಿದ್ದೇನೆ. ಇಂತಹವೆಲ್ಲಾ ರಾಜಕೀಯದಲ್ಲಿ ನಡೆಯುತ್ತೇವೆ ಎಂದು ಕೇಜ್ರಿವಾಲ್ ನನಗೆ ಹೇಳಿದ್ದಾಗಿ ಮಿಶ್ರಾ ಆರೋಪಿಸಿದ್ದರು.
ವಾಟರ್ ಟ್ಯಾಂಕರ್ ಹಗರಣ ಬಯಲುಗೊಳಿಸುತ್ತೇನೆ ಎನ್ನುವ ಆತಂಕದಿಂದ ನನ್ನನ್ನು ವಜಾ ಮಾಡಿರಬಹುದು ಎಂದು ಕಪಿಲ್ ಮಿಶ್ರಾ ದೆಹಲಿ ಸಿಎಂ ವಿರುದ್ಧ ಆರೋಪ ಮಾಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.