ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪ್ರಬಲ ರಾಜಕೀಯ ಪಕ್ಷಗಳಾಗಿವೆ. ಈ ಪೈಕಿ ಈ ಬಾರಿ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಮತ್ತು ಎನ್ ಡಿಎ ಕೂಟದ ನಡುವೆ ನೇರ ಹಣಾಹಣಿ ಎನ್ನಬಹುದು. ಕಾಂಗ್ರೆಸ್ ನಿಂದ ಡಿಕೆ ಸುರೇಶ್, ರಕ್ಷಾ ರಾಮಯ್ಯ, ಮೃಣಾಲ್ ಠಾಕೂರ್, ಗೀತಾ ಶಿವರಾಜ್ ಕುಮಾರ್ ಪ್ರಮುಖ ಸ್ಪರ್ಧಿಗಳಾಗಿದ್ದರೆ ಎನ್ ಡಿ ಎ ಕೂಟದಿಂದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಕಣದಲ್ಲಿದ್ದಾರೆ. ಅವರ ಜೊತೆಗೆ ಡಾ.ಸಿಎನ್ ಮಂಜುನಾಥ್ ಅಚ್ಚರಿಯ ಫಲಿತಾಂಶ ನೀಡುವ ನಿರೀಕ್ಷೆಯಲ್ಲಿದ್ದಾರೆ. 28 ಸೀಟುಗಳ ಪೈಕಿ ಎಷ್ಟು ಎನ್ ಡಿಎ ಪಾಲಾಗಲಿದೆ ಎಷ್ಟು ಕಾಂಗ್ರೆಸ್ ಕೈ ಸೇರುತ್ತದೆ ಎಂಬ ಕದನ ಕುತೂಹಲ ಕರ್ನಾಟಕದ ಕಣದಲ್ಲಿದೆ.
ಬೆಂಗಳೂರು ಸೆಂಟ್ರಲ್ ನಲ್ಲಿ ಪಿಸಿ ಮೋಹನ್ ಗೆಲುವು
ಬೆಂಗಳೂರಿನ ಎಲ್ಲಾ ನಾಲ್ಕೂ ಕ್ಷೇತ್ರಗಳೂ ಬಿಜೆಪಿ ಪಾಲಾಗಿದೆ. ಬೆಂಗಳೂರು ಸೆಂಟ್ರಲ್ ನಲ್ಲಿ ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ ಜೊತೆ ತೀವ್ರ ಪೈಪೋಟಿ ನಡೆಸಿದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪಿಸಿ ಮೋಹನ್ ಕೊನೆಗೂ ಗೆಲುವು ಸಾಧಿಸಿದ್ದಾರೆ.
ಚಿಕ್ಕೋಡಿಯಲ್ಲಿ ಪ್ರಿಯಾಂಕ ಜಾರಕಿಹೊಳಿ ಗೆಲುವು
ಚಿಕ್ಕೋಡಿಯಲ್ಲಿ ಸತೀಶ್ ಜಾರಕಿಹೊಳಿ ಪುತ್ರಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ.
ಮೈಸೂರಿನಲ್ಲಿ ಯದುವೀರ್ ಒಡೆಯರ್ ಗೆಲುವು
ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದ ರಾಜವಂಶಸ್ಥ ಯದುವೀರ್ ಒಡೆಯರ್ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಗೆದ್ದ ಡಾ ಸಿಎನ್ ಮಂಜುನಾಥ್
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ ಸಿಎನ್ ಮಂಜುನಾಥ್ ಗೆಲುವು ದಾಖಲಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ನ ಡಿಕೆ ಸುರೇಶ್ ಸೋತಿರುವುದು ಸಹೋದರ ಡಿಕೆ ಶಿವಕುಮಾರ್ ದೊಡ್ಡ ಮುಖಭಂಗವಾಗಿದೆ.
ಐದನೇ ಬಾರಿಗೆ ಗೆದ್ದು ಪ್ರಹ್ಲಾದ್ ಜೋಶಿ ದಾಖಲೆ
ಧಾರವಾಡ ಕ್ಷೇತ್ರದಲ್ಲಿ ಸತತ ಐದನೇ ಬಾರಿಗೆ ಗೆದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಾಖಲೆ ಮಾಡಿದ್ದಾರೆ. 80 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಅವರು ಕಾಂಗ್ರೆಸ್ ನ ವಿನೋದ್ ಅಸೂಟಿ ವಿರುದ್ಧ ಗೆದ್ದಿದ್ದಾರೆ. ಇದುವರೆಗೆ ಸತತವಾಗಿ ಐದು ಬಾರಿ ಗೆದ್ದ ಇತಿಹಾಸವೇ ಇರಲಿಲ್ಲ. ಇದೀಗ ಜೋಶಿ ಈ ದಾಖಲೆ ಮಾಡಿದ್ದಾರೆ.
ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳಗೆ ಗೆಲುವು
ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು
ಬಹುನಿರೀಕ್ಷಿತ ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲುವು
ಮಂಡ್ಯದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಭರ್ಜರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರುಗೆ ಹೀನಾಯ ಸೋಲು ಅನುಭವಿಸಿದ್ದಾರೆ.
ಜಗದೀಶ್ ಶೆಟ್ಟರ್ ಗೆ ಗೆಲುವು
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿ ಮಣಾಲ್ ಹೆಬ್ಬಾಳ್ಕರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು
ಉತ್ತರ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಗೆ ಸೋಲಾಗಿದೆ.
ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಗೆಲುವು
ಕರ್ನಾಟಕದ ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದಾರೆ.
ಬಳ್ಳಾರಿಯಲ್ಲಿ ಶ್ರೀರಾಮುಲುಗೆ ಹಿನ್ನಡೆ
ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಹಿನ್ನಡೆ ಅನುಭವಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಇ. ತುಕರಾಂಗೆ ಮುನ್ನಡೆಯಿದೆ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಹಿನ್ನಡೆ
ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ 10 ಸಾವಿರ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ತೇಜಸ್ವಿ ಸೂರ್ಯಗೆ 60 ಸಾವಿರ ಮತಗಳ ಮುನ್ನಡೆ
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಎದುರು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ 60 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕುಮಾರಸ್ವಾಮಿಗೆ 1 ಲಕ್ಷ ಮತಗಳ ಮುನ್ನಡೆ
ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಮುನ್ನಡೆ ಕಾಪಾಡಿಕೊಂಡು ಬಂದಿದ್ದಾರೆ. ಎಷ್ಟೆಂದರೆ 1 ಲಕ್ಷ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಉಡುಪಿ ಚಿಕ್ಕಮಗಳೂರಿನಲ್ಲಿ ಶ್ರೀನಿವಾಸ್ ಪೂಜಾರಿ ಮುನ್ನಡೆ
ಉಡುಪಿ ಚಿಕ್ಕಮಗಳೂರಿನಲ್ಲಿ ಶ್ರೀನಿವಾಸ್ ಪೂಜಾರಿಗೆ ಭಾರೀ ಮುನ್ನಡೆ ಕಂಡುಬಂದಿದೆ. ಇಲ್ಲಿ ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಹಿನ್ನಡೆ ಅನುಭವಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್ ಗೆ ಮುನ್ನಡೆ
ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ, ಬಿಜೆಪಿ ಅಭ್ಯರ್ತಿ ಡಾ. ಸುಧಾಕರ್ ಗೆ ಮುನ್ನಡೆ ಕಂಡುಬಂದಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹಿನ್ನಡೆ ಅನುಭವಿಸಿದ್ದಾರೆ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಹಿನ್ನಡೆ
ಗಮನಾರ್ಹ ಸಂಗತಿಯೆಂದರೆ ಹಾಸನದಲ್ಲಿ ಆರಂಭಿಕ ಮುನ್ನಡೆಯಲ್ಲಿದ್ದ ಹಾಲಿ ಸಂಸದ, ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಹಿನ್ನಡೆಯಲ್ಲಿದ್ದಾರೆ.
ಮಧ್ಯಪ್ರದೇಶದಲ್ಲಿ ಕ್ಲೀನ್ ಸ್ವೀಪ್ ನತ್ತ ಬಿಜೆಪಿ
ಮಧ್ಯಪ್ರದೇಶದಲ್ಲಿ ಬಿಜೆಪಿ ಭಾರೀ ಮುನ್ನಡೆಯಲ್ಲಿದ್ದು ಕ್ಲೀನ್ ಸ್ವೀಪ್ ನತ್ತ ಸಾಗಿದೆ.
ಎನ್ ಡಿಎ 291, ಇಂಡಿಯಾ 210
ಒಟ್ಟಾರೆಯಾಗಿ ಎನ್ ಡಿಎ 291 ಸ್ಥಾನಗಳಲ್ಲಿ ಮತ್ತು ಇಂಡಿಯಾ ಒಕ್ಕೂಟ 210 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಇತರರು 42 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಬೆಂಗಳೂರು ಉತ್ತರದಲ್ಲಿ ಶೋಭಾ ಮುನ್ನಡೆ
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ರಾಜೀವ್ ಗೌಡ ಎದುರು ಬಿಜೆಪಿ ಶೋಭಾ ಕರಂದ್ಲಾಜೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬೆಂಗಳೂರು ಸೆಂಟ್ರಲ್ ನಲ್ಲಿ ಪಿಸಿ ಮೋಹನ್
ಬೆಂಗಳೂರು ಸೆಂಟ್ರಲ್ ನಲ್ಲಿ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೈಸೂರಿನಲ್ಲಿ ಯದುವೀರ್ ನಾಗಲೋಟ
ಮೈಸೂರಿನಲ್ಲಿ ರಾಜವಂಶಸ್ಥ, ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮುನ್ನಡೆಯ ನಾಗಲೋಟ ಮುಂದುವರಿಸಿದ್ದಾರೆ.
-
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಆರಂಭಿಕ ಹಂತದಿಂದಲೂ ಡಾ ಸಿಎನ್ ಮಂಜುನಾಥ್ ಮುನ್ನಡೆಯಲ್ಲಿದ್ದರು. ಆದರೆ ಇದೀಗ ಅವರ ಎದುರಾಳಿ ಕಾಂಗ್ರೆಸ್ ನ ಡಿಕೆ ಸುರೇಶ್ ಮುನ್ನಡೆ ಸಾಧಿಸಿದ್ದಾರೆ.
-
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರೀಕ್ಷೆಯಂತೇ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮುನ್ನಡೆ ಕಾಯ್ದುಕೊಂಡಿದ್ದಾರೆ.
-
ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಮುನ್ನಡೆಯಲ್ಲಿದ್ದಾರೆ.
-
ಶಿವಮೊಗ್ಗದಲ್ಲಿ ಕೇವಲ 76 ಮತಗಳಿಂದ ಬಿವೈ ರಾಘವೇಂದ್ರ ಮುನ್ನಡೆಯಲ್ಲಿದ್ದಾರೆ.
-
ಕೊಯಮತ್ತೂರಿನಲ್ಲಿ ಅಣ್ಣಾಮಲೈ ಮುನ್ನಡೆ
-
ಅಯೋಧ್ಯೆಯಲ್ಲಿ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಗೆ ಹಿನ್ನಡೆ
-
ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಮುನ್ನಡೆ
-
ತಿರುವನಂತಪುರಂನಲ್ಲಿ ಶಶಿ ತರೂರ್ ಗೆ ಹಿನ್ನಡೆ
-
ಕೋಲಾರದಲ್ಲಿ ಮಲ್ಲೇಶ್ ಬಾಬು ಮುನ್ನಡೆ
-
ರಾಜಸ್ಥಾನ್ ನಲ್ಲಿ ಎನ್ ಡಿಎಗೆ 6 ಕ್ಷೇತ್ರ, ಇಂಡಿಯಾ ಒಕ್ಕೂಟ 3 ಕ್ಷೇತ್ರದಲ್ಲಿ ಮುನ್ನಡೆ
-
ತೂತುಕುಡಿ ಕ್ಷೇತ್ರದಲ್ಲಿ ಕನ್ನಿಮೊಳಿಗೆ ಮುನ್ನಡೆ
-
ಬೆಳಗಾವಿಯಲ್ಲಿ ಬಿಜೆಪಿಯ ಜಗದೀಶ್ ಶೆಟ್ಟರ್ ಗೆ ಹಿನ್ನಡೆ
-
ಮೂರನೇ ಹಂತದಲ್ಲಿ ಡಿಕೆ ಸುರೇಶ್ ಗೆ ಹಿನ್ನಡೆ
-
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಆರಂಭಿಕ ಹಂತದಲ್ಲಿ ಅಂಚೆ ಮತಗಳ ಮೂಲಕ ಮುನ್ನಡೆ ಸಾಧಿಸಿದ್ದ ಡಾ ಸಿಎನ್ ಮಂಜುನಾಥ್ ಬಳಿಕ ಹಿನ್ನಡೆ ಸಾಧಿಸಿದ್ದರು. ಇದೀಗ ಮೂರನೇ ಸುತ್ತಿನ ಮತ ಎಣಿಕೆ ಬಳಿಕ ಡಿಕೆ ಸುರೇಶ್ ಮತ್ತೆ ಹಿನ್ನಡೆ ಅನುಭವಿಸಿದ್ದು, ಮಂಜುನಾಥ್ ಮುನ್ನಡೆಯಲ್ಲಿದ್ದಾರೆ.
-
ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಆರಂಭಿಕ ಹಿನ್ನಡೆ
-
ಲೈಂಗಿಕ ಕಿರುಕುಳ ಆರೋಪದಲ್ಲಿ ಜೈಲು ಸೇರಿರುವ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಮುನ್ನಡೆಯಲ್ಲಿದ್ದಾರೆ.
-
ಕನೌಜ್ ನಲ್ಲಿ ಅಖಿಲೇಶ್ ಯಾದವ್ ಗೆ ಹಿನ್ನಡೆ
ಉತ್ತರ ಪ್ರದೇಶದಲ್ಲಿ ಎಸ್ ಪಿ ನಾಯಕ ಅಖಿಲೇಶ್ ಯಾದವ್ ಕನೌಜ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇಲ್ಲಿ ಅಖಿಲೇಶ್ ಆರಂಭಿಕ ಹಿನ್ನಡೆಯಲ್ಲಿದ್ದಾರೆ.
-
ಮಂಡ್ಯದಲ್ಲಿ ಕುಮಾರಸ್ವಾಮಿ ಲೀಡಿಂಗ್
ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ 16 ಸಾವಿರ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಮಧ್ಯಪ್ರದೇಶದಲ್ಲಿ ಬಿಜೆಪಿ 10/ಕಾಂಗ್ರೆಸ್ 1
ಮಧ್ಯ ಪ್ರದೇಶದಲ್ಲಿ ಬಹುತೇಕ ಕೇಸರಿಮಯವಾಗಲಿದೆ. ಬಿಜೆಪಿ 10 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
- ಕ್ರಿಕೆಟಿಗ ಯೂಸುಫ್ ಪಠಾಣ್ ಗೆ ಹಿನ್ನಡೆ
ಪಶ್ಚಿಮ ಬಂಗಾಲದಲ್ಲಿ ಟಿಎಂಸಿಯಿಂದ ಸ್ಪರ್ಧಿಸಿದ್ದ ಕ್ರಿಕೆಟಿಗ ಯೂಸುಫ್ ಪಠಾಣ್ ಹಿನ್ನಡೆಯಲ್ಲಿದ್ದಾರೆ.
- ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿಗೆ ಹಿನ್ನಡೆ
ಹಾವೇರಿಯಲ್ಲಿ ಆರಂಭಿಕ ಹಂತದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಹಿನ್ನಡೆ ಉಂಟಾಗಿದೆ.
ಮೈಸೂರಿನಲ್ಲಿ ಯದುವೀರ್ ಗೆ ಮುನ್ನಡೆ
ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಒಡೆಯರ್ ಗೆ ಮುನ್ನಡೆ ಕಂಡುಬಂದಿದೆ.
-
ಮಲ್ಲಿಕಾರ್ಜುನ ಖರ್ಗೆ ಅಳಿಯನಿಗೆ ಹಿನ್ನಡೆ
ಕಲಬುರಗಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ, ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣಗೆ ಹಿನ್ನಡೆ
-
270 ಮುನ್ನಡೆ ದಾಟಿದ ಎನ್ ಡಿ
ದೇಶಧಾದ್ಯಂತ ಒಟ್ಟಾರೆ 270 ಕ್ಕ್ಷೇತ್ರಗಳಲ್ಲಿ ಎನ್ ಡಿಎ ಮುನ್ನಡೆಯಲ್ಲಿದ್ದರೆ, ಇಂಡಿಯಾ ಒಕ್ಕೂಟ 189 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇತರರು 52 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಡಾ ಸಿಎನ್ ಮಂಜುನಾತ್ 18 ಸಾವಿರ ಮುನ್ನಡೆ
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ ಸಿಎನ್ ಮಂಜುನಾಥ್ 18 ಸಾವಿರ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಡಿಕೆ ಸುರೇಶ್ ಹಿನ್ನಡೆ ಅನುಭವಿಸುತ್ತಿದ್ದಾರೆ.
- ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಮುನ್ನಡೆ
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ತೇಜಸ್ವಿ ಸೂರ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.
- ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ಗೆ ಭಾರೀ ಹಿನ್ನಡೆ
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಬಿವೈ ರಾಘವೇಂದ್ರ ಭಾರೀ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ತೀರಾ ಹಿನ್ನಡೆಯಲ್ಲಿದ್ದಾರೆ. ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಮೂರನೇಸ್ಥಾನದಲ್ಲಿದ್ದಾರೆ.
ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಮುನ್ನಡೆ
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮುನ್ನಡೆ ಕಾಯ್ದುಕೊಂಡಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಕಾಂಗ್ರೆಸ್ ನ ಮೃಣಾಲ್ ಹೆಬ್ಬಾಳ್ಕರ್ ಹಿನ್ನಡೆಯಲ್ಲಿದ್ದಾರೆ.