Publish Date: Sat, 15 Apr 2023 (09:29 IST)
Updated Date: Sat, 15 Apr 2023 (10:08 IST)
ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ.
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇದೇ ಪ್ರಕರದಲ್ಲಿ ಅರೆಸ್ಟ್ ಆಗಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ಏಪ್ರಿಲ್ 16 ಭಾನುವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಲಾಗಿದೆ.
ಈಗಾಗಲೇ ಆಪ್ನ ಹಲವು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಿದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರಿಗೂ ಸಮನ್ಸ್ ಜಾರಿ ಮಾಡಲಾಗಿದೆ.
ಈ ಪ್ರಕರಣದ ಜೊತೆ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೋವಾ ಪೊಲೀಸರು ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಏಪ್ರಿಲ್ 27ಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.