ಈಗಾಗಲೇ ದಿನೇಶ್ ಗುಂಡುರಾವ್ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮೂರು ತಿಂಗಳು ಕಳೆದಿದೆ. ಆದರೂ ಇನ್ನೂ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಆಗಿಲ್ಲ.
ಈ ಹಿನ್ನಲೆಯಲ್ಲಿ ಇಂದು ದಿನೇಶ್ ಗುಂಡೂರಾವ್ ನವದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಸೋನಿಯಾ ಭೇಟಿಗೆ ಸಮಯ ನಿಗದಿಯಾಗಿದ್ದು, ರಾಜ್ಯ ರಾಜಕಾರಣದ ಬೆಳವಣೆಗೆ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.