Webdunia - Bharat's app for daily news and videos

Install App

ರಾಷ್ಟ್ರಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಸಾಹಸಿಕ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು

Sampriya
ಶುಕ್ರವಾರ, 27 ಸೆಪ್ಟಂಬರ್ 2024 (18:54 IST)
ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024ರ ಸಾಹಸಿಕ ಪ್ರವಾಸಿ ತಾಣ (ಅಡ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮಕ್ಕೆ ಶುಕ್ರವಾರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನವದೆಹಲಿಯ ವಿಗ್ಯಾನ್‌ ಭವನದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಪ್ರಶಸ್ತಿ ಪ್ರದಾನ ಮಾಡಿದರು. ಕುತ್ಲೂರು ಗ್ರಾಮದ ಪರವಾಗಿ ಹರೀಶ್ ಡಾಕಯ್ಯ ಪೂಜಾರಿ, ಶಿವರಾಜ್ ಅಂಚನ್‌ ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ  ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿಸಿದರು.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್‌ ಗೋಪಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರವಾಸೋದ್ಯಮ ಇಲಾಖೆ ಎಂಟು ವಿಭಾಗಗಳಲ್ಲಿ ಆಯೋಜಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.

ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋದ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೇಶನ್ -2024 ಅನ್ನು ಏರ್ಪಡಿಸಲಾಗಿತ್ತು.

 ನಾರಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುತ್ಲೂರು ನಿವಾಸಿಗಳಾಗಿದ್ದು, ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವಹರೀಶ್ ಡಾಕಯ್ಯ ಪೂಜಾರಿ, ಕತಾರ್ ಉದ್ಯೋಗಿ ಸಂದೀಪ್ ಕುತ್ಲೂರು ಮತ್ತು ಶಿವರಾಜ್‌ ಅಂಚನ್‌ ಅವರು ತಮ್ಮ ಗ್ರಾಮದ ಪ್ರವಾಸಿ ತಾಣಗಳು, ಪರಿಸರ ಹಾಗೂ ಪ್ರಕೃತಿಯ ಸೊಬಗಿನ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿ ಇದನ್ನು ಸ್ಪರ್ಧಾ ನಿಯಮದಂತೆ ಆನ್‌ಲೈನ್‌ನಲ್ಲಿ ಆಪ್‌ಲೋಡ್ ಮಾಡಿದ್ದರು. ಇದರ ಬಗ್ಗೆ ಹಲವು ಸುತ್ತುಗಳಲ್ಲಿ ಪ್ರವಾಸಿ ತಾಣಗಳ ಮಾಹಿತಿಯನ್ನು ಪ್ರವಾಸೋದ್ಯಮ ಮಂತ್ರಾಲಯ ಪಡೆದುಕೊಂಡಿತ್ತು. ದೇಶಾದ್ಯಂತ ನಡೆದ ʼಅತ್ಯುತ್ತಮ ಪ್ರವಾಸಿ ಹಳ್ಳಿಗಳು' ಸ್ಪರ್ಧೆಯಲ್ಲಿ ಕುತ್ತೂರು ಗ್ರಾಮ ಆಯ್ಕೆಯಾಗಿದೆ.

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಗ್ರಾಮದಲ್ಲಿ ಅರ್ಬಿ ಫಾಲ್ಸ್ ಎಂದು ಸ್ಥಳೀಯರು ಕರೆಯುವ ಅದ್ಭುತವಾದ ಜಲಪಾತವಿದ್ದು, ವರ್ಷದ ಏಳೆಂಟು ತಿಂಗಳು ತುಂಬಿ ಹರಿಯುತ್ತಿರುವುದನ್ನು ವೀಕ್ಷಿಸುವುದೇ ಸೊಬಗು. ಇಲ್ಲಿನ ಬೆಟ್ಟದಲ್ಲಿ ಹಲವರು ಟ್ರೆಕ್ಕಿಂಗ್ ಮಾಡುತ್ತಿದ್ದು, ಚಾರಣಪ್ರಿಯರಿಗೆ ಹೇಳಿ ಮಾಡಿಸಿದ ಜಾಗ. ಬೆಟ್ಟದಲ್ಲಿ ಬೈಕ್‌ಗಳಲ್ಲಿ ಸಾಹಸ ಕ್ರೀಡೆಗಳೂ ನಡೆಯುತ್ತವೆ. ಪಕ್ಕದಲ್ಲೇ ನದಿ ಇದ್ದು, ಫಿಶಿಂಗ್ ಮಾಡಬಹುದು. ಕುತ್ಲೂರಿನ 50 ಕಿ.ಮೀ. ಆಸುಪಾಸಿನಲ್ಲಿ ಧರ್ಮಸ್ಥಳ, ಕಾರ್ಕಳ, ಮೂಡುಬಿದಿರೆ, ಮಂಗಳೂರು ಮತ್ತಿತರ ಜನಪ್ರಿಯ ಪ್ರವಾಸಿ ತಾಣ, ಬೀಚ್, ದೇವಸ್ಥಾನ, ತೀರ್ಥಕ್ಷೇತ್ರಗಳಿವೆ. ಇವೆಲ್ಲ ಮಾಹಿತಿಯನ್ನು ಯುವಕರ ತಂಡ ಪ್ರವಾಸೋದ್ಯಮ ಇಲಾಖೆಗೆ ಅಚ್ಚುಕಟ್ಟಾಗಿ ಫೋಟೋ, ವಿಡಿಯೋ ಸಹಿತ ದಾಖಲೆಗಳಲ್ಲಿ ಒಪ್ಪಿಸಿದೆ.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments