ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲಂಚ ಆರೋಪ ಮಾಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸಮರ್ಥಿಸಿಕೊಂಡಿದ್ದಾರೆ.
ರಾಹುಲ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಲಾಲು, ಮೋದಿ ಈಗ ಸಂಪೂರ್ಣವಾಗಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದಿದ್ದಾರೆ.
ಯಾವುದೇ ಆಧಾರವಿಲ್ಲದೇ ರಾಹುಲ್ ಈ ಗಂಭೀರ ಆರೋಪವನ್ನು ಮಾಡಿರಲು ಸಾಧ್ಯವೇ ಇಲ್ಲ. ಪ್ರಧಾನಿಗಳ ಮೇಲೆ ಸುಮ್ಮಸುಮ್ಮನೆ ಯಾರು ಆರೋಪ ಮಾಡಲು ಸಾಧ್ಯ. ರಾಹುಲ್ ಈ ರೀತಿಯಲ್ಲಿ ಆರೋಪಿಸುತ್ತಿದ್ದಾರೆಂದರೆ ಮೋದಿ ತಪ್ಪು ಮಾಡಿದ್ದು ನಿಜವಿರಬೇಕು. ಈ ವಿಷಯದಲ್ಲಿ ಸುಪ್ರೀಂ ಕೂಡಲೇ ತನಿಖೆಗೆ ಆದೇಶಿಸಬೇಕು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ