ಮುಂಬೈ : ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಇಂದು ಬೆಳಗ್ಗೆಯೇ ದಾಳಿ ಮಾಡಿದ್ದಾರೆ.
1,034 ಕೋಟಿ ರೂ.ಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಎರಡು ಬಾರಿ ವಿಚಾರಣೆ ನಡೆಸಿದ್ದರು. ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಅಧಿವೇಶನವನ್ನು ಉಲ್ಲೇಖಿಸಿ ಹಿಂದಿನ ಸಮನ್ಸ್ ತಪ್ಪಿಸಿದ ನಂತರ ಸಂಜಯ್ ರಾವತ್ ಅವರನ್ನು ಜುಲೈ 27 ರಂದು ತನಿಖಾ ಸಂಸ್ಥೆಯು ಕರೆಸಿತ್ತು.
ಇಂದು ಬೆಳಗ್ಗೆ ಮುಂಬೈನ ಬಂಡಪ್ನಲ್ಲಿರುವ ರಾವತ್ ಅವರ ಮನೆಗೆ ತನಿಖಾ ಸಂಸ್ಥೆ ತಂಡವು ಸಿಆರ್ಪಿಎಫ್ ಅಧಿಕಾರಿಗಳ ಜೊತೆ ದಾಳಿ ಮಾಡಿದೆ. ಸದ್ಯ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಏಪ್ರಿಲ್ನಲ್ಲಿ, ಜಾರಿ ನಿರ್ದೇಶನಾಲಯವು ತನ್ನ ತನಿಖೆಯ ಭಾಗವಾಗಿ ರಾವತ್ ಅವರ ಪತ್ನಿ ವರ್ಷಾ ರಾವತ್ ಮತ್ತು ಅವರ ಇಬ್ಬರು ಸಹಚರರ 11.15 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.