Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ: ಮಾರ್ಚ್ 31 ರ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ ಅತ್ಯಂತ ಕಡಿಮೆ ಕೊರೋನಾ ಪ್ರಕರಣಗಳು ಕಳೆದ 24 ಗಂಟೆಯಲ್ಲಿ ವರದಿಯಾಗಿದೆ.
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 70,421 ಕೊರೋನಾ ಪ್ರಕರಣಗಳು ದಾಖಲಾಗಿದ್ದು, 3,921 ಸಾವು ಸಂಭಸಿದೆ. ಇದು ಕಳೆದ ಎರಡು ತಿಂಗಳಲ್ಲಿ ದಾಖಲಾದ ಕನಿಷ್ಠ ಪ್ರಕರಣಗಳಾಗಿವೆ.
ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ, ತಮಿಳುನಾಡು, ದೆಹಲಿಯಲ್ಲಿ ಇಂದಿನಿಂದ ಅನ್ ಲಾಕ್ ಪ್ರಕ್ರಿಯೆ ಶುರುವಾಗಿದೆ. ಕೇರಳದಲ್ಲೂ ಇನ್ನೆರಡು ದಿನಗಳಲ್ಲಿ ಲಾಕ್ ಡೌನ್ ಮುಕ್ತಾಯವಾಗಲಿದೆ. ಹೀಗಾಗಿ ಮುಂದಿನ ಎರಡು ದಿನಗಳಲ್ಲಿ ಕೊರೋನಾ ಪ್ರಕರಣದಲ್ಲಿ ಏರಿಕೆಯಾಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಹೀಗಾಗಿ ಈ ವಾರ ಮಹತ್ವದ್ದಾಗಿದೆ.