Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಇಂಫಾಲ್ : ಮಣಿಪುರದಲ್ಲಿ ಶಾಂತಿ ಸ್ಥಾಪಿಸಬೇಕಾದರೆ, ಬಿಜೆಪಿ ಸರ್ಕಾರಕ್ಕೆ ಇನ್ನೂ 5 ವರ್ಷ ಅವಕಾಶ ಕೊಡಿ ಎಂದು ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮಣಿಪುರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ನಮಗೆ ಇನ್ನೂ 5 ವರ್ಷ ಅವಕಾಶ ಕೊಡಿ. ರಾಜ್ಯದಲ್ಲಿ ಶಾಂತಿ ನೆಲೆಸಲು ಬಿಜೆಪಿ ಸರ್ಕಾರ ಮಣಿಪುರದ ಬಂಡಾಯ ಗುಂಪುಗಳೊಂದಿಗೆ ಮಾತುಕತೆಗೆ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವು ಶಾಂತಿ ಸ್ಥಾಪನೆಗೆ ಇದೇ ರೀತಿಯ ಉಪಕ್ರಮಗಳನ್ನು ಕೈಗೊಂಡಿದೆ. ಈಶಾನ್ಯದಲ್ಲಿ 9,500 ಕ್ಕೂ ಹೆಚ್ಚು ಜನರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಸೇರಿಕೊಂಡಿದ್ದಾರೆ ಎಂದು ಅಮಿತ್ ಶಾ ವಿವರಿಸಿದ್ದಾರೆ.