Select Your Language

Notifications

webdunia
webdunia
webdunia
webdunia

ಲಿವಿಂಗ್ ರಿಲೇಷನ್: 14 ಬಾರಿ ಗರ್ಭಪಾತ !

ಪೊಲೀಸರು
ನವದೆಹಲಿ : ಕಳೆದ 8 ವರ್ಷಗಳಿಂದ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದು, 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡಿದ್ದಾಳೆ.

ಜುಲೈ 5 ರಂದು ಆಗ್ನೇಯ ದೆಹಲಿಯ ಜೈತ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕಳೆದ ಎಂಟು ವರ್ಷಗಳ ಅವಧಿಯಲ್ಲಿ 33 ವರ್ಷದ ಮಹಿಳೆಯೊಬ್ಬರು ಗೆಳೆಯನ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದು 14 ಬಾರಿ ಗರ್ಭಪಾತಕ್ಕೆ ಒಳಗಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮದುವೆಯ ಭರವಸೆಯ ಮೇರೆಗೆ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದ, ಕೊನೆಗೆ ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಆಕೆ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.

ಮಹಿಳೆ ತನ್ನ ಪತಿಯಿಂದ ಸುಮಾರು 7-8 ವರ್ಷಗಳಿಂದ ದೂರವಾಗಿದ್ದಳೆಂದು ಬಳಿಕ ಆರೋಪಿಯೊಂದಿಗೆ ಕಳೆದ 8 ವರ್ಷಗಳಿಂದ ಲಿವಿಂಗ್ ರಿಲೇಷನ್ನಲ್ಲೇ ಇದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನೈಸರ್ಗಿಕ ವಿಕೋಪದಿಂದ ಯಾತ್ರಾರ್ಥಿಗಳು ಸಾವು?