ಬೆಂಗಳೂರು: ಜೂನ್ 18 ರಿಂದ ದೇಶದಾದ್ಯಂತ ಲಾರಿ ಮುಷ್ಕರ ನಡೆಸಲು ಲಾರಿ ಮಾಲಿಕರ ಸಂಘ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿರುವುದು ಮತ್ತು ಥರ್ಡ್ ಪಾರ್ಟಿ ಪ್ರೀಮಿಯಂ ದರ ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮುಷ್ಕರ ನಡೆಸಲಾಗುತ್ತಿದೆ.
ಇದರಿಂದಾಗಿ ತರಕಾರಿ, ಹಣ್ಣು, ಸಾಮಾನುಗಳು ಸಾಕಷ್ಟು ಪೂರೈಕೆಯಾಗದೇ ಬೆಲೆ ಹೆಚ್ಚಳವಾಗುವ ನಿರೀಕ್ಷೆಯಿದೆ. ರಾಜ್ಯ ಲಾರಿ ಮಾಲಿಕರ ಸಂಘವೂ ಈ ಮುಷ್ಕರದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕೆಲವು ಅಗತ್ಯ ವಸ್ತುಗಳನ್ನು ಇಂದೇ ಖರೀದಿಸಿ!
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.