ನವದೆಹಲಿ: ಪ್ರಿಯತಮೆ ಮನೆಗೆ ಪಿಸ್ತೂಲ್ ಸಮೇತ ಹೋಗಿದ್ದ ಪ್ರಿಯಕರ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯಲ್ಲಿ ನಡೆದಿದೆ.
26 ವರ್ಷದ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯ ಮನೆಗೆ ತೆರಳಿದ್ದು, ಮಾತುಕತೆ ಬಳಿಕ ಈ ದುಷ್ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರ ನಡುವೆ ಯಾವುದೋ ಕಾರಣಕ್ಕೆ ಮನಸ್ತಾಪ ಉಂಟಾಗಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಆದರೆ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಆತ್ಮಹತ್ಯೆಗೆ ಮೊದಲು ಯುವಕ ಪತ್ರ ಬರೆದಿಟ್ಟಿಲ್ಲ. ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.