Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಶ್ವಾಸಕೋಶ ವೈಫಲ್ಯವೇ ಚೀತಾ ಸಾವಿಗೆ ಕಾರಣ : ವೈದ್ಯರ ಸ್ಪಷ್ಟನೆ

ಶ್ವಾಸಕೋಶ ವೈಫಲ್ಯವೇ ಚೀತಾ ಸಾವಿಗೆ ಕಾರಣ : ವೈದ್ಯರ ಸ್ಪಷ್ಟನೆ
ಭೋಪಾಲ್ , ಮಂಗಳವಾರ, 25 ಏಪ್ರಿಲ್ 2023 (10:45 IST)
ಭೋಪಾಲ್ : ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಹೃದಯ-ಶ್ವಾಸಕೋಶ ವೈಫಲ್ಯದಿಂದ 2ನೇ ಚೀತಾ ಸಾವನ್ನಪ್ಪಿದೆ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ.
 
ಕಳೆದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ತರಿಸಲಾಗಿದ್ದ 12 ಚೀತಾಗಳ ಪೈಕಿ ಉದಯ್ ಹೆಸರಿನ ಗಂಡು ಚೀತಾ ಭಾನುವಾರ ಸಾವನ್ನಪ್ಪಿತ್ತು. ಇದರಿಂದ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಒತ್ತಾಯ ಕೇಳಿಬಂದಿತ್ತು. ಈ ಬೆನ್ನಲ್ಲೇ ವೈದ್ಯರು ಚೀತಾ ಸಾವಿಗೆ ಕಾರಣವನ್ನು ತಿಳಿಸಿದ್ದಾರೆ. 

ಉದಯ್ ಹೆಸರಿನ ಚೀತಾದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ, ಅದು ಹೃದಯ-ಶ್ವಾಸಕೋಶದ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್ ಚೌಹಾಣ್ ತಿಳಿಸಿದ್ದಾರೆ. ಜಬಲ್ಪುರ ಮತ್ತು ಭೋಪಾಲ್ನ ತಲಾ ಒಬ್ಬ ವಿಧಿವಿಜ್ಞಾನ ತಜ್ಞರನ್ನೊಳಗೊಂಡ ಐವರು ತಜ್ಞರ ಸಮಿತಿ ಶವ ಪರೀಕ್ಷೆ ನಡೆಸಿತು. 

Share this Story:

Follow Webdunia kannada

ಮುಂದಿನ ಸುದ್ದಿ

ಅನುಷ್ಕಾ ಶೆಟ್ಟಿಗೆ ನಿನ್ನೆ ಎಲೋನ್ ಮಸ್ಕ್ ಕೊಟ್ಟ ಗಿಫ್ಟ್ ಏನು?