ಚೆನ್ನೈ: ಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿಯವರನ್ನು ತಡರಾತ್ರಿ ನಗರದ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಮೂರು ದಿನಗಳಿಂದ ಜ್ವರ, ಮೂತ್ರಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿಯವರಿಗೆ ಮನೆಯಲ್ಲಿಯೇ ಕಾವೇರಿ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈಗ ಕರುಣಾನಿಧಿಗೆ ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ರಾತ್ರಿ ರಕ್ತದೊತ್ತಡ ತೀರಾ ಕಡಿಮೆಯಾದ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಕರುಣಾನಿಧಿ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಬಳಗವೇ ಬೀಡುಬಿಟ್ಟಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.