ಚೆನ್ನೈ: ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಇನ್ನೂ ಎರಡು ದಿನ ಕಾವೇರಿ ಆಸ್ಪತ್ರೆಯಲ್ಲೇ ಇರಲಿದ್ದಾರೆ.
ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿಗೆ ರಕ್ತದೊತ್ತಡದಲ್ಲಿ ತೀವ್ರ ಇಳಿಕೆಯಾಗಿದ್ದರಿಂದ ಮೊನ್ನೆ ತಡ ರಾತ್ರಿ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುವಿನಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಈ ನಡುವೆ ಕರುಣಾನಿಧಿ ಅನಾರೋಗ್ಯ ಹಿನ್ನಲೆಯಲ್ಲಿ ಉಪ ರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಇಂದು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಮಿಳುನಾಡಿನಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.