ಕೇಂದ್ರ ಸರಕಾರದ ಮಹತ್ವದ ಗೋಹತ್ಯೆ ನಿಷೇಧ ಕಾಯ್ದೆಗೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ತಡೆಯಾಜ್ಞೆ ನೀಡಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರಗಳು ನಾಲ್ಕು ವಾರಗಳಲ್ಲಿ ಕೋರ್ಟ್ ನೋಟಿಸ್‌ಗೆ ಉತ್ತರಿಸುವಂತೆ ಆದೇಶ ನೀಡಿದೆ.
ಸೆಲ್ವ ಗೋಮತಿ, ಆಶಿಕ್ ಬಾವಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮಧುರೈ ಹೈಕೋರ್ಟ್, ಆಹಾರ ಸೇವನೆ ಮನುಷ್ಯರ ಮೂಲಹಕ್ಕು.ಇದರಲ್ಲಿ ಯಾರೂ ಮಧ್ಯಪ್ರವೇಶ ಮಾಡುವುದು ಬೇಡ ಎಂದು ಅಭಿಪ್ರಾಯಪಟ್ಟಿದೆ.
ಕೇಂದ್ರ ಮತ್ತು ರಾಜ್ಯ ಸರಕಾರಗಳು ನಾಲ್ಕು ವಾರದೊಳಗೆ ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ಯಾವುದೇ ಆದೇಶ ಜಾರಿಗೊಳಿಸುವುದು ಬೇಡ ಎಂದು ನಿರ್ದೇಶನ ನೀಡಿದೆ.
ಮಧುರೈ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಕಾರ್ತಿಕೇಯನ್ ಮತ್ತು ಮುರಳಿಧರನ್ ನೇತೃತ್ವದ ನ್ಯಾಯಪೀಠ, ಕೇಂದ್ರ ಸರಕಾರಕ್ಕೆ ಮತ್ತು ತಮಿಳುನಾಡು ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.