ಪೋರ್ಟ್ ಬ್ಲೇರ್ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿರುವ ಅಂಡಮಾನ್ ಸಮುದ್ರದಲ್ಲಿ ಮಂಗಳವಾರ 4.9 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪ ಮುಂಜಾನೆ 3:40 ರ ವೇಳೆಗೆ ಸಂಭವಿಸಿದೆ. ಇದರ ಕೇಂದ್ರ ಬಿಂದುವನ್ನು 77 ಕಿ.ಮೀ ಆಳದಲ್ಲಿ ಗುರುತಿಸಲಾಗಿದೆ ಎಂದು ಎನ್ಸಿಎಸ್ ತಿಳಿಸಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಹಾನಿ ನಡೆದಿರುವ ಬಗ್ಗೆ ವರದಿಯಾಗಿಲ್ಲ.
ಎನ್ಸಿಎಸ್ ಪ್ರಕಾರ ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ.