Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮೋದಿ ಸರ್ಕಾರ ಯಾವ ಕ್ಷಣದಲ್ಲಿ ಬೇಕಾದ್ರೂ ಬೀಳಬಹುದು: ಮಲ್ಲಿಕಾರ್ಜುನ ಖರ್ಗೆ

Mallikarjun Kharge

Krishnaveni K

ನವದೆಹಲಿ , ಶನಿವಾರ, 15 ಜೂನ್ 2024 (14:52 IST)
ನವದೆಹಲಿ: ಸರಳ ಬಹುಮತದೊಂದಿಗೆ ಸರ್ಕಾರ ರಚಿಸಿರುವ ಮೋದಿ ಸರ್ಕಾರ ಯಾವ ಕ್ಷಣದಲ್ಲಿ ಬೇಕಾದರೂ ಮುರಿದು ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಎನ್ ಡಿಎ ಸರ್ಕಾರ ಬೈ ಮಿಸ್ಟೇಕ್ ಆಗಿ ರಚನೆಯಾಗಿದೆ. ಇದು ಸದ್ಯದಲ್ಲೇ ಬಿದ್ದು ಹೋಗಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಇಂಡಿಯಾ ಒಕ್ಕೂಟ ಸಭೆ ಸೇರಿ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿ ಸರ್ಕಾರ ರಚನೆ ಪ್ರಯತ್ನ ಕೈ ಬಿಟ್ಟಿತ್ತು.

ಇದೀಗ ಮಲ್ಲಿಕಾರ್ಜುನ ಖರ್ಗೆ ಇಂತಹದ್ದೊಂದು ಹೇಳಿಕೆ ನೀಡಿರುವುದು ಮಹತ್ವ ಪಡೆದಿದೆ. ಆ ಮೂಲಕ ಎನ್ ಡಿಎ ಮಿತ್ರ ಪಕ್ಷಗಳ ಸೆಳೆಯಲು ಕಾಂಗ್ರೆಸ್ ತೆರೆ ಮರೆಯಲ್ಲೇ ಪ್ರಯತ್ನ ಮುಂದುವರಿಸಿರಬಹುದು ಎಂಬ ಅನುಮಾನ ಮೂಡಿದೆ. ಇದೇ ಕಾರಣಕ್ಕೆ ಖರ್ಗೆ ಇಂತಹದ್ದೊಂದು ಹೇಳಿಕೆ ನೀಡಿರಬಹುದು ಎಂದು ಊಹಿಸಲಾಗಿದೆ.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 240 ಸ್ಥಾನಗಳನ್ನು ಗೆದ್ದ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಸರ್ಕಾರ ರಚಿಸಲು ಬಹುಮತವಿಲ್ಲದ ಕಾರಣ ಮಿತ್ರ ಪಕ್ಷಗಳ ಸಹಾಯದೊಂದಿಗೆ ಸರ್ಕಾರ ರಚನೆ ಮಾಡಿತ್ತು. ಇದೀಗ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಾರನ್ನೂ ದೂರಲ್ಲ, ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ ಎಂದ ಯಡಿಯೂರಪ್ಪ