Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪ್ರಣಾಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಖರ್ಗೆ: 25 ಗ್ಯಾರಂಟಿ ಘೋಷಣೆ

ಪ್ರಣಾಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಖರ್ಗೆ: 25 ಗ್ಯಾರಂಟಿ ಘೋಷಣೆ

Sampriya

ನವದೆಹಲಿ , ಶುಕ್ರವಾರ, 5 ಏಪ್ರಿಲ್ 2024 (13:19 IST)
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನ್ಯಾಯ ಪತ್ರದ ಹೆಸರಿನಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದರು.

ಈ ವೇಳೆ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್‌ ಗಾಂಧಿ ಹಾಗೂ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಚಿದಂಬರಂ ಹಾಗೂ ವೇಣುಗೋಪಾಲ್‌ ಉಪಸ್ಥಿತರಿದ್ದರು.

ಪ್ರಣಾಳಿಕೆಯಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ, ಅಗ್ನಿಪಥ್ ಯೋಜನೆ ರದ್ದು, ವಿವಿಧ ಹಂತಗಳಲ್ಲಿ 30 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ, ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳಿಗಿರುವ ಮೀಸಲಾತಿ ಮೀತಿ ಹೆಚ್ಚಳ ಹಾಗೂ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

Photo Courtesy X

Share this Story:

Follow Webdunia kannada

ಮುಂದಿನ ಸುದ್ದಿ

ಕಮಲ ಕೈ ಹಿಡಿದ ಸುಮ: ಈ ದಿನ ಸುದಿನ ಎಂದ ಮಂಡ್ಯ ಸಂಸದೆ