Webdunia - Bharat's app for daily news and videos

Install App

ಪ್ರಧಾನಿ ಮೋದಿ, ತಾನೇ ಕುಳಿತ ಮರದ ಟೊಂಗೆಯನ್ನು ಕತ್ತರಿಸಿದ ಕಾಳಿದಾಸನಂತೆ: ಮಮತಾ ಬ್ಯಾನರ್ಜಿ

Webdunia
ಶುಕ್ರವಾರ, 6 ಜನವರಿ 2017 (16:21 IST)
ನೋಟು ನಿಷೇಧ ಜಾರಿಗೊಳಿಸಿದ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಕಾಳಿದಾಸನಂತೆ,ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾತ್ರ ದೇಶ ವಿನಾಶದಿಂದ ಉಳಿಸಬಹುದಾಗಿದೆ ಎಂದು ಹೇಳಿದ್ದಾರೆ.
 
ಪ್ರಸ್ತುತ ಪ್ರಧಾನಿಯಾಗಿರುವ ಮೋದಿ ಪ್ರಧಾನಿ ಸ್ಥಾನಕ್ಕೆ ಅನರ್ಹ ವ್ಯಕ್ತಿ. ಅವರು ತಾನೇ ಕುಳಿತ ಮರದ ಟೊಂಗೆಯನ್ನು ಕತ್ತರಿಸಿದ ಕಾಳಿದಾಸನಂತೆ. ನನ್ನ ಪ್ರಕಾರ ಇಂತಹ ಸ್ಥಿತಿಯಿಂದ ದೇಶವನ್ನು ರಾಷ್ಟ್ರಪತಿ ಮಾತ್ರ ಬಚಾವ್ ಮಾಡಬಲ್ಲರು ಎಂದು  ಕಿಡಿಕಾರಿದ್ದಾರೆ. 
 
ನೋಟು ನಿಷೇಧದಿಂದಾಗಿ ದೇಶದಲ್ಲಿ ಉಂಟಾಗಿರುವ ಅರಾಜಕತೆ ಪರಿಸ್ಥಿತಿಯನ್ನು ನಿಭಾಯಿಸಲು ರಾಷ್ಟ್ರಪತಿ ಮುಖರ್ಜಿ ದೇಶದಲ್ಲಿ ರಾಷ್ಟ್ರಪತಿ ಅಡಳಿತ ಹೇರುವುದು ಸೂಕ್ತ. ಒಂದು ವೇಳೆ ಆಡ್ವಾಣಿ, ರಾಜನಾಥ್ ಸಿಂಗ್ ಅಥವಾ ಅರುಣ್ ಜೇಟ್ಲಿ ಸರಕಾರವನ್ನು ಮುನ್ನಡೆಸಿದಲ್ಲಿ ನನಗೆ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ. 
 
ಕೇಂದ್ರ ಸರಕಾರದ ನೋಟು ನಿಷೇಧ ರಾಜ್ಯದಲ್ಲಿ 1.7 ಕೋಟಿ ಜನರ ಮೇಲೆ ನೇರ ಪರಿಣಾಮ ಬೀರಿದೆ. 81.5 ಲಕ್ಷ ಜನರು ನಿರುದ್ಯೋಗಿಗಳಾಗಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಮೋದಿ ವಿರುದ್ಧ ಗುಡುಗಿದ್ದಾರೆ.
 
ಭಾರತ ದೇಶ ಅಭಿವೃದ್ಧಿಯಲ್ಲಿ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ನೋಟು ನಿಷೇಧ ದೇಶದ ಆರ್ಥಿಕತೆಯನ್ನು ಅಧೋಗತಿಗೆ ಇಳಿಸಿದೆ. ರೈತರು ತುಂಬಾ ಸಂಕಷ್ಟದಲ್ಲಿದ್ದಾರೆ. ಇದರಿಂದ ಮುಂಬರುವ ದಿನಗಳಲ್ಲಿ ಅಗತ್ಯ ವಸ್ತುಗಳ ದರಗಳಲ್ಲಿ ಹೆಚ್ಚಳವಾಗಲಿದೆ. ಕೇಂದ್ರ ಸರಕಾರ ಹೊಣೆ ಹೊರಲಿದೆಯೇ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments