Publish Date: Wed, 06 Jan 2021 (07:49 IST)
Updated Date: Wed, 06 Jan 2021 (07:51 IST)
ಮುಜಫರ್ ನಗರ : ತನ್ನ ಸಹೋದ್ಯೋಗಿಯ 16 ವರ್ಷದ ಮಗಳನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಹುಡುಗಿಯ ತಂದೆ ಹಾಗೂ ಆರೋಪಿ ಪೇಪರ್ ಗಿರಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಹುಡುಗಿ ಮನೆಯಲ್ಲಿ ಒಬ್ಬಳೆ ಇದ್ದಾಗ ಮನೆಗೆ ಬಂದ ಆರೋಪಿ ಆಕೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದ್ದಾನೆ. ಇದನ್ನು ಆಕೆ ವಿರೋಧಿಸಿದಾಗ ಅವಳ ಕತ್ತು ಹಿಸುಕಿ ಕೊಲೆ ಮಾಡಿ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಬಿಗಿದಿದ್ದಾನೆ. ಆಕೆಯ ಪೋಷಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಹುಡುಗಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.