ಟುಟಿಕೋರಿನ್ : ಸೊಸೆಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಮಾವ ಕೊಲೆ ಮಾಡಿದ ಘಟನೆ ತಮಿಳುನಾಡಿನ ಟುಟಿಕೋರಿನ್ ನಲ್ಲಿ ನಡೆದಿದೆ.
ಸಂತ್ರಸ್ತ ಯಾವಾಗಲೂ ಆರೋಪಿ ಸೊಸೆಗೆ ಕಿರುಕುಳ ನೀಡುತ್ತಿದ್ದ. ಮತ್ತು ಈ ಹಿಂದೆ ಆಕೆಯನ್ನು ಕೊಲೆ ಮಾಡಲು ಯತ್ನಿಸಿ ಕೈಲು ಸೇರಿದ್ದ. ಜೈಲಿಂದ ಬಿಡುಗಡೆಯಾದ ಬಳಿಕವು ಆತ ಮತ್ತೆ ಆಕೆಗೆ ಕಿರುಕುಳ ನೀಡಲು ಶುರುಮಾಡಿದ್ದಾನೆ. ಹೀಗಾಗಿ ಮಾವ ಆತನನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಮೂರು ತಂಡಗಳನ್ನು ರಚಿಸಿದ್ದಾರೆ ಎನ್ನಲಾಗಿದೆ.