Publish Date: Fri, 24 Jun 2022 (08:20 IST)
Updated Date: Fri, 24 Jun 2022 (08:50 IST)
ನವದೆಹಲಿ: 48 ವರ್ಷದ ಪತ್ನಿಗೆ ಅಕ್ರಮ ಸಂಬಂಧವಿದೆಯೆಂದು ಶಂಕಿಸಿ ಪತಿಯೇ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಪತ್ನಿ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಅನುಮಾನ ಹೊಂದಿದ್ದ ಪತಿ ಆಕೆಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.
ತಕ್ಷಣವೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬದುಕಿಸಲಾಗಲಿಲ್ಲ. ಘಟನೆ ಬಗ್ಗೆ ಪುತ್ರಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ದಂಪತಿಗೆ ಐವರು ಮಕ್ಕಳಿದ್ದರು. ಪತಿ ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.