ಲಕ್ನೋ: ಇಬ್ಬರು ಮಕ್ಕಳ ಮುಂದೆಯೇ ಪತ್ನಿಯನ್ನು ಬಹುಮಡಿ ಕಟ್ಟಡದಿಂದ ಪತ್ನಿಯನ್ನು ನೂಕಿ ಕೊಂದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. 2011 ರಲ್ಲಿ ದಂಪತಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಇಬ್ಬರು ಮಕ್ಕಳೂ ಇದ್ದರು.
ಆದರೆ ಈ ನಡುವೆ ಗಂಡ ಬೇರೊಬ್ಬ ಹೆಣ್ಣಿನ ಸಹವಾಸಕ್ಕೆ ಬಿದ್ದಿದ್ದ. ಈ ವಿಚಾರಕ್ಕೆ ದಂಪತಿ ನಡುವೆ ಜಗಳವಾಗುತ್ತಿತ್ತು. ಇದೇ ವಿಚಾರವಾಗಿ ಆಕ್ರೋಶಗೊಂಡ ಪತಿ ಪತ್ನಿಯನ್ನು ಕೊಂದಿದ್ದಾನೆ. ಈ ಸಂಬಂಧ ಮಹಿಳೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಪತಿಯನ್ನು ಬಂಧಿಸಲಾಗಿದೆ.