ಚಂಡೀಘಡ: ಇತ್ತೀಚೆಗೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಸಾಮಾನ್ಯ ಎನ್ನುವಷ್ಟರ ಮಟ್ಟಿಗೆ ಅಪಾಯಕಾರಿಯಾಗಿ ಬೆಳೆದಿದೆ. ಇಂತಹದ್ದೇ ಒಂದು ಮನ ಕಲಕುವ ಘಟನೆ ಹರ್ಯಾಣದಲ್ಲಿ ನಡೆದಿದೆ.
30 ವರ್ಷದ ದುಷ್ಕರ್ಮಿಯೊಬ್ಬ 10 ವರ್ಷದ ಬಾಲಕಿ ಮೇಲೆ ಚಿತ್ರಹಿಂಸೆ ನೀಡಿ ಅತ್ಯಾಚಾರವೆಸಗಿದ್ದಾನೆ. ಮನೆಯ ಹೊರಗೆ ಆಟವಾಡಿಕೊಂಡಿದ್ದ ಬಾಲಕಿಯ ಗುಪ್ತಾಂಗಕ್ಕೆ ಮರದ ತುಂಡುಗಳನ್ನು ತುರುಕಿ ಗಾಯಗೊಳಿಸಿ ಅತ್ಯಾಚಾರವೆಸಗಿದ್ದಾನೆ.
ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ