ಪುಣೆ: ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬ ಮಹಿಳೆಯನ್ನು ಕೊಲ್ಲಲು ಪ್ರಯತ್ನಿಸಿದ ಘಟನೆ ಪುಣೆಯಲ್ಲಿ ನಡೆದಿದೆ.
38 ವರ್ಷದ ಆರೋಪಿ ಮಹಿಳೆಯೊಬ್ಬರನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಇದನ್ನು ಪ್ರಶ್ನಿಸಿದ ಮಹಿಳೆ ಆತನಿಗೆ ಛೀಮಾರಿ ಹಾಕಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಆತ ಮರುದಿನ ಆಕೆಯನ್ನು ಕೊಲ್ಲಲು ಯತ್ನಿಸಿದ್ದಾನೆ.
ಕಾರಿನಲ್ಲಿ ಪತಿಯೊಂದಿಗೆ ಸಾಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಪತಿಯ ಮೇಲೆ ಹಲ್ಲೆ ನಡೆಸಿದ್ದು, ಮಹಿಳೆಯನ್ನು ಕೊಲ್ಲಲು ಯತ್ನಿಸಿದ್ದಾನೆ. ಈ ವೇಳೆ ಬಿಡಿಸಲು ಹೋದ ಮಹಿಳೆಗೂ ಗಾಯವಾಗಿದೆ. ಈ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.