Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ: ಮನಮೋಹನ್ ಸಿಂಗ್

Manmohan Singh

Krishnaveni K

ನವದೆಹಲಿ , ಗುರುವಾರ, 30 ಮೇ 2024 (13:49 IST)
Photo Credit: X
ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಶುರುವಾಗಿರುವಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಲಿ ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಟೀಕಿಸಿದ್ದಾರೆ.

ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಿಮ್ಮ ಆಸ್ತಿಯನ್ನು ಕಸಿದುಕೊಂಡು ಹೆಚ್ಚು ಮಕ್ಕಳಿರುವವರಿಗೆ ಹಂಚುವುದಾಗಿ ಹೇಳಿದೆ. ಈ ದೇಶದ ಪ್ರಧಾನಿಯಾಗಿದ್ದವು ಹಿಂದೊಮ್ಮೆ ದೇಶದ ಸಂಪತ್ತಿನ ಮೊದಲ ಹಕ್ಕು ಅಲ್ಪಸಂಖ್ಯಾತರದ್ದು ಎಂದಿದ್ದರು’ ಎಂದು ಟೀಕಾ ಪ್ರಹಾರ ನಡೆಸಿದ್ದರು. ಈ ಮೂಲಕ ಮನಮೋಹನ್ ಸಿಂಗ್ ಅವರಿಗೂ ಟಾಂಗ್ ಕೊಟ್ಟಿದ್ದರು.

ಈಗ ಅದೇ ವಿಚಾರವಾಗಿ ಮನಮೋಹನ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ‘ಚುನಾವಣೆ ಸಂದರ್ಭದಲ್ಲಿ ಬಂದತಂಹ ಹೇಳಿಕೆಗಳನ್ನು ನಾನು ಎಚ್ಚರಿಕೆಯಿಂದ ಗಮನಿಸುತ್ತಿದ್ದೆ. ಮೋದಿಜಿ ಸದಾ ಧ್ವೇಷದ ಬೀಜ ಬಿತ್ತುವ ಭಾಷಣಗಳನ್ನು ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿ ಹುದ್ದೆಗೆ ಅದರದ್ದೇ ಆದ ಗಾಂಭೀರ್ಯತೆಯಿದೆ. ಆದರೆ ಮೋದಿ ಆ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ವ್ಯಕ್ತಿ. ಒಬ್ಬ ಪ್ರಧಾನಿ ಎಂಬುದನ್ನೂ ಮರೆತು ಅವರು ವಿಪಕ್ಷಗಳ ವಿರುದ್ಧ ಅತ್ಯಂತ ಕೀಳುಮಟ್ಟದ ಟೀಕೆ ಮಾಡುತ್ತಾ ಬಂದಿದ್ದಾರೆ. ನಾನು ಪ್ರಧಾನಿಯಾಗಿದ್ದಾಗ ಯಾವತ್ತೂ ಒಂದು ಸಮುದಾಯವನ್ನು ಕಡೆಗಣಿಸಿ ಮತ್ತೊಂದು ಸಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿಲ್ಲ’ ಎಂದಿದ್ದಾರೆ.

ಈ ದೇಶದಲ್ಲಿ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಒದಗಿಸಿಕೊಡಲು ಸಾಧ್ಯವಾಗುತ್ತದೆ ಎಂದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಂದ ಮನಮೋಹನ್ ಸಿಂಗ್ ಪಂಜಾಬ್ ಮತದಾರರಿಗೆ ಅಭಿವೃದ್ಧಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಿಂದ ಮತ ಹಾಕಿ ಎಂದು ಕರೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ: ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ಕಾರ್ಯಕರ್ತರು