Webdunia - Bharat's app for daily news and videos

Install App

ದೀಪಾವಳಿಯನ್ನು ನಮ್ಮನ್ನು ಕಾಯುವ ಯೋಧರಿಗೆ ಅರ್ಪಿಸೋಣ: ಮೋದಿ

Webdunia
ಭಾನುವಾರ, 30 ಅಕ್ಟೋಬರ್ 2016 (17:28 IST)
ಈ ಬಾರಿ ದೀಪಾವಳಿಯನ್ನು ಗಡಿಯಲ್ಲಿ ನಮ್ಮ ದೇಶವನ್ನು ಕಾಯುವ ಸೇನಾ ಯೋಧರಿಗೆ ಸಮರ್ಪಿಸೋಣ ಎಂದು ಪ್ರಧಾನಿ ಮೋದಿ ದೇಶಕ್ಕೆ ಕರೆ ನೀಡಿದ್ದಾರೆ. 
 
ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 25ನೇ ಸರಣಿಯಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿದ್ದಾರೆ.
 
ಯೋಧರು ದೇಶಕ್ಕಾಗಿ ಮಾಡುವ ತ್ಯಾಗ, ಬಲಿದಾನಗಳನ್ನು ಮನಸಾರೆ ಕೊಂಡಾಡಿದ ಅವರು, ಯೋಧರು ಸದಾ ನಮ್ಮನ್ನು ರಕ್ಷಿಸುವ ಕಾಯಕದಲ್ಲಿ ತೊಡಗಿರುತ್ತಾರೆ. ಅವರಿಂದಾಗಿ ನಾವು ದೀಪಾವಳಿಯನ್ನು ನಿರಾತಂಕವಾಗಿ ಆಚರಿಸಲು ಸಾಧ್ಯವಾಗುತ್ತಿದೆ. ಇದಕ್ಕಾಗಿ ನಮ್ಮ ಯೋಧರಿಗೆ ಧನ್ಯವಾದಗಳನ್ನು ಹೇಳಲೇ ಬೇಕು ಎಂದಿದ್ದಾರೆ. 
 
ಪಟಾಕಿಯಿಂದ ಸಂಭವಿಸುವ ಅನಾಹುತಗಳಿಗೆ ಕಳವಳ ವ್ಯಕ್ತ ಪಡಿಸಿದ ಅವರು, ಪಟಾಕಿಯಿಂದ ಸಂಭವಿಸುವ ಅವಘಡ ಮಕ್ಕಳ ಭವಿಷ್ಯಕ್ಕೆ ಅಂಧಕಾರ ತರಬಹುದು, ಪೋಷಕರು ಎಚ್ಚರದಿಂದಿರಬೇಕು ಎಂದರು.
 
ಮುಂದುವರೆದು ಕೇರಳ ಬಯಲು ಶೌಚಾಲಯ ಮುಕ್ತ ರಾಜ್ಯವಾಗುವ ನಿಟ್ಟಿನಲ್ಲಿ ಸಾಗುತ್ತಿದೆ ಎಂದ ಅವರು  ತಮ್ಮ ರಾಜ್ಯವನ್ನು ಬಯಲು ಶೌಚ ಮುಕ್ತ ಗೊಳಿಸುವ ಧ್ಯೇಯದೊಂದಿಗೆ ಮುನ್ನುಗ್ಗುತ್ತಿರುವ ಕೇರಳದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕಾರ್ಯವನ್ನು ಶ್ಲಾಘಿಸಿದರು.
 
ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಸ್ಮರಿಸಿಕೊಂಡ ಅವರು, ಸರ್ದಾರ್ ಪುಣ್ಯ ತಿಥಿ ದಿನವನ್ನು ರಾಷ್ಟ್ರೀಯ ಏಕತಾ ದಿವಸವೆಂದು ಆಚರಿಸಲಾಗುವುದು. ದೇಶದ ಏಕತೆಗಾಗಿ ಎಲ್ಲರೂ ಪಣ ತೊಡಬೇಕು ಎಂದು ಕರೆ ನೀಡಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments