Publish Date: Fri, 24 Jul 2026 (18:30 IST)
Updated Date: Fri, 24 Jul 2026 (18:33 IST)
ಚಂಬಾ: ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿ ಜಿಲ್ಲೆಯಲ್ಲಿ ಟ್ಯಾಕ್ಸಿ ಮೇಲೆ ಬೃಹತ್ ಬಂಡೆಗಳು ಬಿದ್ದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.
ಕುಲ್ಲುದಿಂದ ಪಂಗಿಗೆ ತೆರಳುತ್ತಿದ್ದ ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆಗಳು ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅವಶೇಷಗಳ ರಾಶಿಯಡಿ ಸಿಲುಕಿ ಜಜ್ಜಿದ ಸ್ಥಿತಿಯಲ್ಲಿದ್ದ ಕಾರಿನ ದೃಶ್ಯಗಳು ಕಂಡುಬಂದವು. ಚಾಲಕನನ್ನು ಬಿರ್ ಸಿಂಗ್ ಎಂದು ಗುರುತಿಸಲಾಗಿದೆ.
ಲಾಹೌಲ್-ಸ್ಪಿಟಿ ಜಿಲ್ಲೆಯ ಉದಯಪುರ-ಕಿಲ್ಲಾರ್ ಮಾರ್ಗದಲ್ಲಿರುವ ಕಹು-ದು ನಾಲಾ ಬಳಿ ಈ ಭೂಕುಸಿತ ಸಂಭವಿಸಿದೆ.
ವಾಹನದಲ್ಲಿ 10 ರಿಂದ 12 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಟಿಂಡಿ ಪೊಲೀಸರು, ಸ್ಥಳೀಯ ಆಡಳಿತ ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿದವು.
ಮಾಹಿತಿ ಪಡೆದು ಸ್ಥಳಕ್ಕೆ ತಲುಪಿದ ಪೊಲೀಸ್ ರಕ್ಷಣಾ ತಂಡವು ಗಾಯಗೊಂಡಿದ್ದ ಒಬ್ಬ ವ್ಯಕ್ತಿಯನ್ನು ಸುರಕ್ಷಿತವಾಗಿ ರಕ್ಷಿಸಿದೆ. ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಯುದ್ಧೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಯಿತು.
ಬೇರೊಂದು ಭೂಕುಸಿತದ ಕಾರಣದಿಂದಾಗಿ ಅಧಿಕಾರಿಗಳು ಗುರುವಾರವೇ ಉದಯಪುರ-ಕಿಲ್ಲಾರ್ ರಸ್ತೆಯನ್ನು ಬಂದ್ ಮಾಡಿದ್ದರು. ಇದರಿಂದಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಟಿಂಡಿಯಲ್ಲೇ ಉಳಿದುಕೊಳ್ಳಬೇಕಾಯಿತು.
ರಸ್ತೆ ಸಂಚಾರಕ್ಕೆ ಮುಕ್ತವಾದ ನಂತರ ಶುಕ್ರವಾರ ವಾಹನವು ಪಂಗಿಯತ್ತ ಪ್ರಯಾಣ ಬೆಳೆಸಿತು. ಆದರೆ, ಬೆಟ್ಟದ ಒಂದು ದೊಡ್ಡ ಭಾಗವು ಹಠಾತ್ತನೆ ಕುಸಿದುಬಿದ್ದಾಗ ದುರಂತ ಸಂಭವಿಸಿತು.
ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಆಡಳಿತ ಮಂಡಳಿಯು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ