Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದೆಹಲಿಯ ಏಮ್ಸ್‌ನಲ್ಲಿ ಭಾರೀ ಬೆಂಕಿ ಅವಘಡ!

ದೆಹಲಿಯ ಏಮ್ಸ್‌ನಲ್ಲಿ ಭಾರೀ ಬೆಂಕಿ ಅವಘಡ!
ನವದೆಹಲಿ , ಸೋಮವಾರ, 7 ಆಗಸ್ಟ್ 2023 (13:56 IST)
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ನಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವರದಿಗಳ ಪ್ರಕಾರ ಬೆಂಕಿ ನಂದಿಸಲು ಘಟನಾ ಸ್ಥಳಕ್ಕೆ 6 ಅಗ್ನಿಶಾಮಕ ವಾಹನಗಳು ಆಗಮಿಸಿವೆ.
 
ಘಟನೆ ವೇಳೆ ಆಸ್ಪತ್ರೆಯಲ್ಲಿದ್ದ ಎಲ್ಲಾ ರೋಗಿಗಳು ಹಾಗೂ ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಏಮ್ಸ್ನ ತುರ್ತು ಚಿಕಿತ್ಸಾ ವಿಭಾಗದ ಮೇಲಿರುವ ಎಂಡೋಸ್ಕೋಪಿ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. 

ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಕರೆ ಬರುತ್ತಲೇ ಸುತ್ತಮುತ್ತಲಿನ ಎಲ್ಲಾ ರೋಗಿಗಳು ಹಾಗೂ ಸಿಬ್ಬಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಎಂಡೋಸ್ಕೋಪಿ ಕೊಠಡಿ ಹಳೆಯ ಹೊರರೋಗಿ ವಿಭಾಗದ ಎರಡನೇ ಮಹಡಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಕೋವಿಡ್ ಆತಂಕ; ಹರಡಿದೆ ಹೊಸ ತಳಿ ಎರಿಸ್