ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಲು ಬಂದ ದಕ್ಷಿಣ ಆಫ್ರಿಕಾದಲ್ಲಿ ವಾಸವಿರುವ ಅನಿವಾಸಿ ಭಾರತೀಯ ಮಹಿಳೆ ಮಥುರಾದ ಗೋಕುಲ್ ಪ್ರದೇಶಕ್ಕೆ ಭೇಟಿ ನೀಡಿದಾಗ ಮೇಲೆ ಪ್ರವಾಸಿ ಗೈಡ್ ಮೋನು, ಹಾಗೂ ಆತನ ಸ್ನೇಹಿತ ವಿಷ್ಣು ಹಾಗೂ ಮತ್ತೋರ್ವ ಸೇರಿ ಅತ್ಯಾಚಾರ ಎಸಗಿದ್ದಾರೆ.
ಈ ಕುರಿತು ಸಂತ್ರಸ್ತೆಯ ಸ್ನೇಹಿತ ಮಥುರಾದ ಮಹಾವದನ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೋಮವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿಸಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.