Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಅಹಮದಾಬಾದ್ : ಸಹದ್ಯೋಗಿಯ ಲೈಂಗಿಕ ಕಿರುಕುಳ ತಾಳಲಾರದೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.
ವ್ಯಕ್ತಿ ಡೆತ್ ನೋಟ್ ಬರೆದಿಟ್ಟಿದ್ದು, ಇದರಲ್ಲಿ ಸಹದ್ಯೋಗಿ ಒಬ್ಬರು ತನ್ನೊಂದಿಗೆ ಸಲಿಂಗ ಸಂಬಂಧ ಹೊಂದಲು ಒತ್ತಡ ಹೇರುತ್ತಿದ್ದಾರೆ. ಅದಕ್ಕೆ ಒಪ್ಪದಿದ್ದಾಗ ಇತರ ಸಹೋದ್ಯೋಗಿಗಳ ಮುಂದೆ ತನಗೆ ಅವಮಾನ ಮಾಡುತ್ತಿದ್ದ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇನೆ. ಅದಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಸಹೋದ್ಯೋಗಿಯ ವಿರುದ್ಧ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದು, ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.