Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹೋಶಿಯಾರ್ ಪುರ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಮಾನಭಂಗ ಎಸಗಿದ್ದು, ಇದನ್ನು ಸಹಿಸಲಾಗದೆ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಂಜಾಬ್ ನ ಹೋಶಿಯಾರ್ ಪುರದಲ್ಲಿ ನಡೆದಿದೆ.
ಈ ಬಗ್ಗೆ ಸಂತ್ರಸ್ತೆಯ ಗ್ರಾಮದ ಇಬ್ಬರು ಪುರುಷರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಆರೋಪಿಗಳನ್ನು ಬಂಧಿಸದ ಕಾರಣ ಬಾಲಕಿಯ ಶವವನ್ನು ದಹನ ಮಾಡದೆ ಆಕೆಯ ಕುಟುಂಬಸ್ಥರು ಪ್ರತಿಭಟನೆ ಮಾಡಿದ್ದಾರೆ.
ಬಳಿಕ ಪೊಲೀಸರ ಭರವಸೆ ಮೇರೆಗಗೆ ಅಂತಿಮ ವಿಧಿಗಳನ್ನು ನೇರವೇರಿಸಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.