Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹೈದರಾಬಾದ್ : ಯುವತಿಯ ಮೇಲೆ ಮಾನಭಂಗ ಎಸಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಯಾಗಂಟಿಪಲ್ಲಿ ಬಳಿ ನಡೆದಿದೆ.
ತಂದೆಯ ಜೊತೆ ಕೂಲಿ ಕೆಲಸ ಮಾಡಲು ಬಂದಿದ್ದ ಯುವತಿಯನ್ನು ಕಾರ್ಮಿಕರು ಎಳೆದೊಯ್ದು ಮಾನಭಂಗ ಎಸಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ.
ಈ ಬಗ್ಗೆ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅನುಮಾನಗೊಂಡ ಯುವಕನೊರ್ವನನ್ನು ವಿಚಾರಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.