Publish Date: Sun, 17 Jan 2021 (07:23 IST)
Updated Date: Sun, 17 Jan 2021 (07:31 IST)
ಭೋಪಾಲ್ : ಸೋಶಿಯಲ್ ಮೀಡಿಯಾದಲ್ಲಿ ಪರಿಚಯನಾದ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ 8 ತಿಂಗಳ ಕಾಲ ಯುವತಿಯ ಮೇಲೆ ಮಾನಭಂಗ ಎಸಗಿದ ಘಟನೆ ನಡೆದಿದೆ.
ಸೋಶಿಯಲ್ ಮೀಡಿಯಾದಲ್ಲಿ ಪರಿಚಯನಾದ ಯುವಕ ಯುವತಿಯನ್ನು ಭೇಟಿಯಾದ ವೇಳೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದಕ್ಕೆ ಆಕೆ ಪ್ರತಿಭಟಿಸಿದಾಗ ಮದುವೆಯಾಗುವುದಾಗಿ ಭರವಸೆ ನೀಡಿ ಮತ್ತೆ ಮತ್ತೆ ಇಂತಹ ಕೃತ್ಯ ಎಸಗುತ್ತಿದ್ದ. ಆದರೆ ಇತ್ತೀಚೆಗೆ ಆತ ಮತ್ತೊಬ್ಬ ಯುವತಿಯನ್ನು ಮದುವೆಯಾಗಲು ಹೊರಟ ಹಿನ್ನಲೆಯಲ್ಲಿ ಈ ಬಗ್ಗೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.