ಉತ್ತರಪ್ರದೇಶ : ಹದಿಹರೆಯದ ಹುಡುಗಿಯ ಮೇಲೆ 50 ವರ್ಷದ ಗ್ರಾಮದ ಮಾಜಿ ಮುಖ್ಯಸ್ಥ ಮಾನಭಂಗ ಎಸಗಿದ ಘಟನೆ ಉತ್ತರಪ್ರದೇಶದ ಫತೇಪುರ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಮಾನಭಂಗ ಎಸಗಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಆದರೆ ಹುಡುಗಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಆರೋಪಿ ಪಂಚಾಯತ್ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಈ ರೀತಿ ಆರೋಪ ಮಾಡಲಾಗಿದೆ ಎಂದು ತಿಳಿಸಿದ್ದಾನೆ.